HEALTH TIPS

ಶ್ರೀಲಂಕಾ: 17 ಭಾರತೀಯ ಮೀನುಗಾರರ ಬಂಧನ

 ಕೊಲಂಬೊ: ಶ್ರೀಲಂಕಾ ಜಲ ಗಡಿಯಲ್ಲಿ ಮೀನುಗಾರಿಕೆ ಮಾಡಿದ ಆರೋಪದ ಮೇಲೆ 17 ಭಾರತೀಯ ಮೀನುಗಾರರನ್ನು ಅಲ್ಲಿನ ನೌಕಾಪಡೆ ಬಂಧಿಸಿದೆ ಎಂದು ಅಧಿಕೃತ ಹೇಳಿಕೆ ತಿಳಿಸಿದೆ.

'ಮನ್ನಾರ್‌ ದ್ವೀಪದ ಉತ್ತರ ಭಾಗದಲ್ಲಿ ಮೀನುಗಾರನ್ನು ಬಂಧಿಸಲಾಗಿದ್ದು, ಎರಡು ಮೀನುಗಾರಿಕಾ ದೋಣಿಯನ್ನು ವಶಕ್ಕೆ ಪಡೆಯಲಾಗಿದೆ.

ಇದಕ್ಕಾಗಿ ವಿಶೇಷ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು' ಎಂದು ಶ್ರೀಲಂಕಾ ನೌಕಾಪಡೆ ಪ್ರಕಣೆಯಲ್ಲಿ ತಿಳಿಸಿದೆ.

ಬಂಧಿತ 17 ಮೀನುಗಾರರನ್ನು ತಲೈಮನ್ನಾರ್‌ಗೆ ಕರೆದೊಯ್ಯಲಾಗಿದ್ದು, ಮುಂದಿನ ಕ್ರಮಕ್ಕಾಗಿ ಮನ್ನಾರ್ ಮೀನುಗಾರಿಕಾ ನಿರೀಕ್ಷಕರಿಗೆ ಹಸ್ತಾಂತರಿಸಲಾಗುವುದು ಎಂದು ಅದು ತಿಳಿಸಿದೆ.

ಈ ವರ್ಷದ ಪ್ರಾರಂಭದಿಂದ ಇಲ್ಲಿಯವರೆಗೆ 413 ಭಾರತೀಯ ಮೀನುಗಾರರನ್ನು ಬಂಧಿಸಿರುವ ಶ್ರೀಲಂಕಾ ನೌಕಾಪಡೆ, 55 ದೋಣಿಗಳನ್ನು ವಶಕ್ಕೆ ಪಡೆದಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries