ಕಾಸರಗೋಡು: ಕೇಂದ್ರ ಸರ್ಕಾರದ ಆಶ್ರಯದಲ್ಲಿ ಸ್ವಚ್ಛತಾ ಹಿ ಸೇವಾ ಅಭಿಯಾನ ಸೆ.17ರಿಂದ ಜಿಲ್ಲೆಯಲ್ಲಿ ನಡೆಯಲಿದೆ. ತ್ಯಾಜ್ಯ ಮುಕ್ತ ಕೇರಳ ಮತ್ತು ನವ ಕೇರಳಂ ಕಾರ್ಯಕ್ರಮಗಳ ಅಂಗವಾಗಿ, ಶುಚಿತ್ವ ಮಿಷನ್, ಕುಟುಂಬಶ್ರೀ, ಮೇರಾ ಯುವ ಭಾರತ್, ನೆಹರು ಯುವ ಕೇಂದ್ರ, ರಾಷ್ಟ್ರೀಯ ಸೇವಾ ಯೋಜನೆ, ರಾಜ್ಯಯುವ ಕಲ್ಯಾಣ ಮಂಡಳಿ, ಸ್ಕೌಟ್ಸ್ ಮತ್ತು ಗೈಡ್ಸ್, ಸಮಾಜ ಕಲ್ಯಾಣ ಪಡೆಗಳು ಜಂಟಿಯಾಗಿ ಸ್ಥಳೀಯಾಡಳಿತ ಸಂಸ್ಥೆಗಳ ಸಹಕಾರದೊಂದಿಗೆ ಸ್ವಚ್ಛತಾ ಕಾರ್ಯ ನಡೆಯಲಿದೆ.
ಗ್ರಾಮೀಣ ಪ್ರದೇಶಗಳಲ್ಲಿ ನೈರ್ಮಲ್ಯಕ್ಕಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮತ್ತು ವಿವಿಧ ಶುಚಿತ್ವ ಚಟುವಟಿಕೆಗಳ ಮೂಲಕ ಸಂಪೂರ್ಣ ಶುಚೀಕರಣ ಯೋಜನೆಗಳನ್ನು ಸೆ.17 ರಿಂದ ಗಾಂಧಿ ಜಯಂತಿಯಾದ ಅಕ್ಟೋಬರ್ 2 ರವರೆಗೆ ಸ್ವಚ್ಛತಾ ಹಿ ಸೇವಾ ಅಭಿಯಾನ ನಡೆಸಲಾಗುವುದು. ಭಾಗಶಃ ನೆಹರು ಯುವ ಕೇಂದ್ರ, ಮೈ ಭಾರತ್ ಮತ್ತು ಸ್ಥಳೀಯಾಡಳಿತ ಇಲಾಖೆ ಶುಚಿತ್ವ ಮಿಷನ್ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಗ್ರಾಮ ಪಂಚಾಯಿತಿ, ನಗರ ಪ್ರದೇಶ ಹಾಗೂ ವಿವಿಧೆಡೆ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.