ಕಾಸರಗೋಡು: ಸ್ವಚ್ಛತಾ ಹಿ ಸೇವಾ-2024 ಅಭಿಯಾನದ ಅಂಗವಾಗಿ ಸಸಿ ನೆಡುವ ಕರ್ಯಕ್ರಮ ಕಾಸರಗೋಡು ಜಿಲ್ಲಾಧಿಕಾರಿ ಕಚೇರಿ ವಠಾರದಲ್ಲಿ ಜರುಗಿತು. ಲೀಡ್ ಬ್ಯಾಂಕ್ ಹಾಗೂ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಸಹಕಾರದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾಸರಗೋಡು ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೆನರಾ ಬ್ಯಾಂಕ್ ಕೊಯಿಕ್ಕೋಡ್ ಸರ್ಕಲ್ ಕಛೇರಿಯ ಎಜಿಎಂ ಬಿಪುಲ್ ಚಂದ್ರ ಸಾಹಾ, ಕಾಸರಗೋಡು ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ವ್ಯವಸ್ಥಾಪಕ ಅಂಶುಮಾನ್ ಡಿ ಉಪಸ್ಥಿತರಿದ್ದು, ಸಿವಿಲ್ ಸಟೇಶನ್ ವಠಾರದಲ್ಲಿ ಸಸಿ ನೆಟ್ಟರು. ಕಾರ್ಯಕ್ರಮದಲ್ಲಿ ಕಾಸರಗೋಡು ಲೀಡ್ ಬ್ಯಾಂಕ್ ಜಿಲ್ಲಾ ಮ್ಯಾನೇಜರ್ ತಿಪ್ಪೇಶ್ ಹಾಗೂ ಬ್ಯಾಂಕ್ ಉದ್ಯೋಗಿಗಳು ಭಾಗವಹಿಸಿದ್ದರು.