ಕಾಸರಗೋಡು: ಪರಿಶಿಷ್ಟ ಜಾತಿ ವರ್ಗದ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟವನ್ನು ಸುಧಾರಿಸುವ ನಿಟ್ಟಿನಲ್ಲಿ ರಚಿಸಲಾಗಿರುವ ಜಿಲ್ಲಾ ಸಮನ್ವಯ ಸಮಿತಿಯ ಮೊದಲ ಸಭೆ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ(ಎಡಿಎಂ)ಸಭಾಂಗಣದಲ್ಲಿ ನಡೆಯಿತು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಅಧ್ಯಕ್ಷರಾಗಿ, ಜಿಲ್ಲಾಧಿಕಾರಿ ಕಾರ್ಯದರ್ಶಿಯಾಘಿ ಮತ್ತು ಜಿಲ್ಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಸಂಚಾಲಕರಾಗಿರುವ ಸಮಿತಿ ಇದಾಗಿದೆ. 14 ಜಿಲ್ಲಾ ಮಟ್ಟದ ಅಧಿಕಾರಿಗಳು ಸಮಿತಿಯ ಸದಸ್ಯರಾಗಿದ್ದಾರೆ.
ಸಭೆಯಲ್ಲಿ ಸೆಪ್ಟೆಂಬರ್ 20 ರೊಳಗೆ ಪ್ರಾದೇಶಿಕ ಸಮನ್ವಯ ಸಮಿತಿಗಳನ್ನು ರಚಿಸಲು ನಿರ್ಧರಿಸಲಾಯಿತು. ಗ್ರಾಮ ಪಂಚಾಯಿತಿ ಅಧ್ಯಕ್ಷರು ಅಧ್ಯಕ್ಷ ಮತ್ತು ಪಂಚಾಯಿತಿ ಕಾರ್ಯದರ್ಶಿ ಸಂಚಾಲಕರು ಸ್ಥಾಯಿ ಸಮಿತಿಯ ಅಧ್ಯಕ್ಷರು ಸದಸ್ಯರಾಗಿರುವ ಪ್ರಾದೇಶಿಕ ಸಮನ್ವಯ ಸಮಿತಿ ರಚಿಸಲಾಗುವುದು. ಸಭೆಯಲ್ಲಿ ಎಡಿಎಂ ಪಿ. ಅಖಿಲ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸಾಮಾಜಿಕ ನ್ಯಾಯ ಅಧಿಕಾರಿ ಆರ್ಯ ಪಿ.ರಾಜ್, ಡಿಡಿಇ ಕಚೇರಿ ಆಡಳಿತ ಸಹಾಯಕ ಶೌಕತ್ ಅಲಿ, ಉಪ ಯೋಜನಾಧಿಕಾರಿ ಎಂ. ಧ್ವಾರಾ ಮೊದಲಾದವರು ಪಾಲ್ಗೊಂಡಿದ್ದರು.