ನವದೆಹಲಿ: ದೇಶದ ವಿವಿಧ ಹೈಕೋರ್ಟ್‌ಗಳಲ್ಲಿ 30 ವರ್ಷಕ್ಕಿಂತ ಹಳೆಯದಾದ ಸುಮಾರು 62,000 ಪ್ರಕರಣಗಳು ಇತ್ಯರ್ಥವಾಗದೇ ಬಾಕಿ ಉಳಿದಿವೆ ಎಂದು ರಾಷ್ಟ್ರೀಯ ನ್ಯಾಯಾಂಗ ದತ್ತಾಂಶ ಗ್ರಿಡ್ (ಎನ್‌ಜೆಡಿಜಿ) ವರದಿ ತಿಳಿಸಿದೆ.
ನವದೆಹಲಿ: ದೇಶದ ವಿವಿಧ ಹೈಕೋರ್ಟ್‌ಗಳಲ್ಲಿ 30 ವರ್ಷಕ್ಕಿಂತ ಹಳೆಯದಾದ ಸುಮಾರು 62,000 ಪ್ರಕರಣಗಳು ಇತ್ಯರ್ಥವಾಗದೇ ಬಾಕಿ ಉಳಿದಿವೆ ಎಂದು ರಾಷ್ಟ್ರೀಯ ನ್ಯಾಯಾಂಗ ದತ್ತಾಂಶ ಗ್ರಿಡ್ (ಎನ್‌ಜೆಡಿಜಿ) ವರದಿ ತಿಳಿಸಿದೆ.
ಅಧಿಕೃತ ಮಾಹಿತಿಯ ಪ್ರಕಾರ, 1952ರಿಂದ ಮೂರು ಪ್ರಕರಣಗಳು ವಿಲೇವಾರಿಗೆ ಕಾಯುತ್ತಿವೆ.
1952ರಿಂದ ಬಾಕಿ ಉಳಿದಿರುವ ಮೂರು ಪ್ರಕರಣಗಳ ಪೈಕಿ ಕಲ್ಕತ್ತ ಹೈಕೋರ್ಟ್‌ನಲ್ಲಿ ಎರಡು ಮತ್ತು ಮದ್ರಾಸ್ ಹೈಕೋರ್ಟ್‌ನಲ್ಲಿ ಒಂದು ಪ್ರಕರಣವಿದೆ.
ಹೈಕೋರ್ಟ್‌ಗಳಲ್ಲಿ ಬಾಕಿ ಉಳಿದಿರುವ ಒಟ್ಟು 58.59 ಲಕ್ಷ ಪ್ರಕರಣಗಳ ಪೈಕಿ 42.64 ಲಕ್ಷ ಸಿವಿಲ್ ಮತ್ತು 15.94 ಲಕ್ಷ ಕ್ರಿಮಿನಲ್ ಪ್ರಕರಣಗಳು ಒಳಗೊಂಡಿವೆ.
ರಾಷ್ಟ್ರೀಯ ನ್ಯಾಯಾಂಗ ದತ್ತಾಂಶ ಗ್ರಿಡ್ (ಎನ್‌ಜೆಡಿಜಿ) ಪ್ರಕಾರ ಹೈಕೋರ್ಟ್‌ಗಳಲ್ಲಿ 20ರಿಂದ 30 ವರ್ಷಗಳಷ್ಟು ಹಳೆಯದಾದ ಸುಮಾರು 2.45 ಲಕ್ಷ ಪ್ರಕರಣಗಳು ಬಾಕಿ ಇವೆ.
ಇತ್ತೀಚೆಗೆ ಜಿಲ್ಲಾ ನ್ಯಾಯಾಂಗದ ಎರಡು ದಿನದ ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದ್ದ ರಾಷ್ಟ್ರಪತಿ ದ್ರೌಪದಿ ಮುರ್ಮು, 'ಸುದೀರ್ಘವಾಗಿ ಕೋರ್ಟ್‌ಗಳಲ್ಲಿ ದಾವೆಗಳು ಬಾಕಿ ಉಳಿದಿರುವುದು ನಮೆಗೆಲ್ಲರಿಗೂ ಅತಿದೊಡ್ಡ ಸವಾಲಾಗಿದೆ. ತ್ವರಿತಗತಿಯಲ್ಲಿ ನ್ಯಾಯ ಒದಗಿಸಲು, ಕೋರ್ಟ್‌ಗಳಲ್ಲಿ ವಿಚಾರಣೆಯನ್ನು ಮುಂದೂಡುವ ಸಂಸ್ಕೃತಿಯನ್ನು ಬದಲಿಸಬೇಕಾದ ಅಗತ್ಯವಿದೆ' ಎಂದು ಪ್ರತಿಪಾದಿಸಿದ್ದರು.
ಜಿಲ್ಲಾ ನ್ಯಾಯಾಲಯಗಳು, ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್ ಸೇರಿದಂತೆ ದೇಶದಾದ್ಯಂತ ವಿವಿಧ ನ್ಯಾಯಾಲಗಳಲ್ಲಿ ಐದು ಕೋಟಿಗೂ ಅಧಿಕ ಪ್ರಕರಣಗಳು ಬಾಕಿ ಉಳಿದಿವೆ.