HEALTH TIPS

ದೆಹಲಿ ವಿಧಾನಸಭೆ: ಕೇಜ್ರಿವಾಲ್‌ಗೆ 41, ಸಿಸೋಡಿಯಾಗೆ 40ನೇ ಸಂಖ್ಯೆಯ ಆಸನ ಮಂಜೂರು

 ವದೆಹಲಿ: ದೆಹಲಿಯ ಮುಖ್ಯಮಂತ್ರಿಯಾಗಿ ವಿಧಾನಸಭೆಯಲ್ಲಿ 1ನೇ ಆಸನದಲ್ಲಿ ಕೂರುತ್ತಿದ್ದ ಎಎಪಿ ಮುಖಂಡ ಅರವಿಂದ ಕೇಜ್ರಿವಾಲ್‌ ಅವರಿಗೆ, ಇದೀಗ 41ನೇ ಸಂಖ್ಯೆಯ ಆಸನವನ್ನು ನೀಡಲಾಗಿದೆ.

ದೆಹಲಿ ವಿಧಾನಸಭೆಯ ಎರಡು ದಿನಗಳ ವಿಶೇಷ ಅಧಿವೇಶನ ಗುರುವಾರ ನಡೆಯಿತು.

ಮುಖ್ಯಮಂತ್ರಿ ಅತಿಶಿಗೆ 1ನೇ ಆಸನ ನೀಡಿದರೆ, ಕೇಜ್ರಿವಾಲ್‌ ಅವರ ಆಪ್ತ ಮನೀಶ್ ಸಿಸೋಡಿಯಾಗೆ ಕೇಜ್ರಿವಾಲ್ ಪಕ್ಕದ 40ನೇ ಆಸನ ನೀಡಲಾಗಿದೆ.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ, ಅತಿಶಿ ಅವರು ಸಿಎಂ ಕಚೇರಿಯಲ್ಲಿ ಕೇಜ್ರಿವಾಲ್ ಕೂರುತ್ತಿದ್ದ ಕುರ್ಚಿಯನ್ನು ಸಾಂಕೇತಿಕವಾಗಿ ಹಾಗೇ ಇಟ್ಟು, ಪಕ್ಕದಲ್ಲಿ ಮತ್ತೊಂದು ಆಸನದಲ್ಲಿ ಕೂತು ಆಡಳಿತ ನಡೆಸುತ್ತಿದ್ದಾರೆ. ಇವರ ಈ ನಡೆಯನ್ನು ಬಿಜೆಪಿ, ಕಾಂಗ್ರೆಸ್ ಖಂಡಿಸಿದ್ದು, ಇದು ಮುಖ್ಯಮಂತ್ರಿ ಸ್ಥಾನಕ್ಕೆ ಮಾಡಿರುವ ಅಪಮಾನ ಎಂದಿವೆ.

ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಕೇಜ್ರಿವಾಲ್‌, ಇತ್ತೀಚೆಗಷ್ಟೇ ತಿಹಾರ್ ಜೈಲಿನಿಂದ ಜಾಮೀನು ಮೇಲೆ ಬಿಡುಗಡೆಗೊಂಡಿದ್ದರು. ಹೊರಬರುತ್ತಿದ್ದಂತೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಪ್ರಾಮಾಣಿಕತೆಯ ಪ್ರಮಾಣಪತ್ರ ಪಡೆದ ನಂತರವಷ್ಟೇ ಅಧಿಕಾರಕ್ಕೆ ಮರಳುವುದಾಗಿ ಘೋಷಿಸಿದ್ದರು. 2025ರ ಫೆಬ್ರುವರಿಯಲ್ಲಿ ದೆಹಲಿ ವಿಧಾನಸಭೆಗೆ ಚುನಾವಣೆ ನಡೆಯಲಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries