HEALTH TIPS

₹5 ಹಣಕ್ಕಾಗಿ ಗಲಾಟೆ: ಕ್ಯಾಬ್ ಚಾಲಕನಿಗೆ ಥಳಿತ, ಮೂವರ ವಿರುದ್ಧ FIR

 ಮುಂಬೈ: ಮಹಾರಾಷ್ಟ್ರದ ಠಾಣೆ ಜಿಲ್ಲೆಯ ಪೆಟ್ರೋಲ್‌ ಬಂಕ್‌ವೊಂದರಲ್ಲಿ ₹5 ಹಣಕ್ಕಾಗಿ ಗಲಾಟೆ ನಡೆದಿದೆ. ಮೂವರು ವ್ಯಕ್ತಿಗಳು ಕ್ಯಾಬ್ ಚಾಲಕನನ್ನು ಥಳಿಸಿದ್ದು, ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಕ್ಯಾಬ್ ಚಾಲಕ ₹300 ನೀಡಿ, ₹295ಕ್ಕೆ ಪ್ರೆಟ್ರೋಲ್‌ ಹಾಕಿಸಿಕೊಂಡಿದ್ದು, ಉಳಿದ ₹5 ವಾಪಸ್ ನೀಡುವಂತೆ ಅಲ್ಲಿನ ಸಿಬ್ಬಂದಿಯನ್ನು ಕೇಳಿದ್ದಾರೆ.

ಈ ವೇಳೆ ಕೋಪಗೊಂಡ ಪ್ರೆಟ್ರೋಲ್‌ ಬಂಕ್ ಸಿಬ್ಬಂದಿ ಚಾಲಕನ ಮೇಲೆ ಮನಸೋಇಚ್ಛೆ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಠಾಣೆ ಜಿಲ್ಲೆಯಲ್ಲಿ ಭಿವಂಡಿಯ ಪೆಟ್ರೋಲ್‌ ಬಂಕ್‌ವೊಂದರಲ್ಲಿ ಈ ಘಟನೆ ನಡೆದಿದೆ.

ಗಾಯಗೊಂಡಿರುವ ಕ್ಯಾಬ್ ಚಾಲಕ ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ಈ ಪ್ರಕರಣ ಸಂಬಂಧ ಭಾರತೀಯ ನ್ಯಾಯಸಂಹಿತೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries