ನವದೆಹಲಿ: ದ್ವಿಚಕ್ರ ವಾಹನದಲ್ಲಿ ಸಾಗಿಸಲಾಗುತ್ತಿದ್ದ 500 ಸ್ನೈಪರ್ ರೈಫಲ್ ಗುಂಡುಗಳನ್ನು ಪೂರ್ವದೆಹಲಿಯ ಮೋತಿ ನಗರ ಪ್ರದೇಶದಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ನವದೆಹಲಿ: ದ್ವಿಚಕ್ರ ವಾಹನದಲ್ಲಿ ಸಾಗಿಸಲಾಗುತ್ತಿದ್ದ 500 ಸ್ನೈಪರ್ ರೈಫಲ್ ಗುಂಡುಗಳನ್ನು ಪೂರ್ವದೆಹಲಿಯ ಮೋತಿ ನಗರ ಪ್ರದೇಶದಲ್ಲಿ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಶನಿವಾರ ರಾತ್ರಿ ಎಂದಿನಂತೆ ವಾಹನಗಳನ್ನು ತಪಾಸಣೆ ಮಾಡುವಾಗ ಬಂದ ಬೈಕ್ ಅನ್ನು ನಿಲ್ಲಿಸಲು ಪೊಲೀಸರು ಸೂಚಿಸಿದ್ದಾರೆ.
ಪೊಲೀಸರು ಬೈಕ್ ಅನ್ನು ತಪಾಸಣೆ ನಡೆಸಿದ್ದು, ಈ ವೇಳೆ 10 ಬಾಕ್ಸ್‌ನಲ್ಲಿ 500 ಜೀವಂತ ಗುಂಡುಗಳು ಪತ್ತೆಯಾಗಿವೆ. ಈ ಬಗ್ಗೆ ಮೋತಿ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಬಂದು ಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.
ಶಸ್ತ್ರಾಸ್ತ್ರ ಕಾಯ್ದೆಯಡಿ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ನಾವು ಪರಿಶೀಲನೆ ನಡೆಸುತ್ತಿದ್ದೇವೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಈ ಗುಂಡುಗಳನ್ನು ಎ.ಕೆ.-47, ಲೈಟ್ ಮಷಿನ್ ಗನ್, ಸೆಲ್ಪ್ ಲೋಡಿಂಗ್ ಗನ್ ಹಾಗೂ ಸ್ನೈಪರ್ ರೈಫಲ್‌ಗಳಲ್ಲಿ ಬಳಸಲಾಗುತ್ತದೆ. ಮೊನಚಾಗಿರುವ ಈ ಗುಂಡುಗಳನ್ನು ಹಾರಿಸಿದರೆ ದೊಡ್ಡ ಅಪಾಯ ಸಂಭವಿಸಲಿದೆ ಎಂದು ಹೆಸರು ಗುಪ್ತವಾಗಿಡಬೇಕು ಎನ್ನುವ ಷರತ್ತಿನೊಂದಿಗೆ ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ.