ಹೈದರಾಬಾದ್: ತೆಲಂಗಾಣದ ಭದ್ರಾದ್ರಿ ಕೊತ್ತಗುಡಂ ಜಿಲ್ಲೆಯಲ್ಲಿ ಮಾವೋವಾದಿಗಳು ಮತ್ತು ಪೊಲೀಸರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಆರು ಮಂದಿ ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಹೈದರಾಬಾದ್: ತೆಲಂಗಾಣದ ಭದ್ರಾದ್ರಿ ಕೊತ್ತಗುಡಂ ಜಿಲ್ಲೆಯಲ್ಲಿ ಮಾವೋವಾದಿಗಳು ಮತ್ತು ಪೊಲೀಸರ ನಡುವೆ ನಡೆದ ಗುಂಡಿನ ಕಾಳಗದಲ್ಲಿ ಆರು ಮಂದಿ ಮಾವೋವಾದಿಗಳು ಹತರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ನಿಷೇಧಿತ ಸಿಪಿಐ (ಮಾವೋವಾದಿ) ಸಂಘಟನೆಯ ಮಾವೋವಾದಿಗಳು ಹತ್ಯೆಯಾಗಿದ್ದಾರೆ.
ಗುಂಡಿನ ಚಕಮಕಿಯಲ್ಲಿ ತೆಲಂಗಾಣ ಪೊಲೀಸ್‌ನ ನಕ್ಸಲ್ ನಿಗ್ರಹ ಪಡೆಯ ಇಬ್ಬರು ಕಾಮಾಂಡೋಗಳು ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಕಾರಕಗುಡಂ ಪೊಲೀಸ್ ಠಾಣಾ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಗುಂಡಿನ ಕಾಳಗ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಾವೋವಾದಿಗಳು ನೆರೆಯ ಛತ್ತೀಸ್‌ಗಢದಿಂದ ತೆಲಂಗಾಣಕ್ಕೆ ಹೋಗಿದ್ದಾರೆ ಎಂಬ ನಿಖರ ಮಾಹಿತಿ ಮೇರೆಗೆ ಪೊಲೀಸ್ ಪಡೆ ಕಾರ್ಯಾಚರಣೆಯನ್ನು ನಡೆಸಿತು ಎಂದು ಅವರು ತಿಳಿಸಿದ್ದಾರೆ.
ಇಬ್ಬರು ಮಹಿಳೆಯರು ಸೇರಿದಂತೆ ಆರು ಮಂದಿ ಮಾವೋವಾದಿಗಳ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಅವರ ಗುರುತು ಪತ್ತೆ ಹಚ್ಚಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ ಮೃತರಲ್ಲಿ ಮಾವೋವಾದಿಗಳ ಹಿರಿಯ ಕೇಡರ್ ಓರ್ವ ಸೇರಿದ್ದಾನೆ ಎನ್ನಲಾಗಿದೆ.
ಘಟನಾ ಸ್ಥಳದಿಂದ ಎರಡು ಎಕೆ47, ಎಸ್‌ಆರ್‌ಆರ್ ಸೇರಿದಂತೆ ಆರು ಶಸ್ತ್ರಾಸ್ತ್ರಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ.