HEALTH TIPS

6 ವಂದೇ ಭಾರತ್ ರೈಲುಗಳಿಗೆ ಪ್ರಧಾನಿ ಮೋದಿ ಚಾಲನೆ

 ರಾಂಚಿ: ಜಾರ್ಖಂಡ್, ಒಡಿಶಾ, ಬಿಹಾರ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಸಂಚರಿಸುವ 6 ವಂದೇ ಭಾರತ್‌ ರೈಲುಗಳಿಗೆ ಪ್ರಧಾನಿ ನರೇಂದ್ರ ಮೋದಿಯವರು ರಾಂಚಿಯಲ್ಲಿ ವರ್ಚುವಲ್‌ ಮೂಲಕ ಭಾನುವಾರ ಚಾಲನೆ ನೀಡಿದರು.

ಇದಕ್ಕೂ ಮೊದಲು, ಜಾರ್ಖಂಡ್‌ನ ಟಾಟಾನಗರದಿಂದ ರೈಲುಗಳಿಗೆ ಚಾಲನೆ ನೀಡಲು ಪ್ರಧಾನಿಯವರು ನಿರ್ಧರಿಸಿದ್ದು, ಪ್ರತಿಕೂಲ ಹವಾಮಾನದ ಕಾರಣದಿಂದ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿತ್ತು.

ಹೊಸ ರೈಲುಗಳು ಟಾಟಾನಗರ-ಪಟ್ನಾ, ಬ್ರಹ್ಮಪುರ-ಟಾಟಾನಗರ, ರೂರ್ಕೆಲಾ-ಹೌರಾ, ದಿಯೋಘರ್-ವಾರಣಾಸಿ, ಭಾಗಲ್ಪುರ-ಹೌರಾ ಮತ್ತು ಗಯಾ-ಹೌರಾ ಮಾರ್ಗಗಳಲ್ಲಿ ಸಂಚರಿಸಲಿವೆ.


ಮೊದಲ ವಂದೇ ಭಾರತ್ ರೈಲನ್ನು 2019ರ ಫೆಬ್ರವರಿ 15ರಂದು ಉದ್ಘಾಟಿಸಲಾಗಿತ್ತು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries