ಮಂಜೇಶ್ವರ: ಟೀಚರ್ಸ್ ಸ್ಪೋಟ್ರ್ಸ್ ಕೌನ್ಸಿಲ್ ಕಾಸರಗೋಡು ಸೀಸನ್-6 ಅಧ್ಯಾಪಕರ ಕ್ರಿಕೆಟ್ ಪಂದ್ಯಾಟ ಮೀಯಪದವು ಶಾಲಾ ಮೈದಾನದಲ್ಲಿ ನಡೆಯಿತ. ಮಂಜೇಶ್ವರ ಬ್ಲಾಕ್ ಪಂಚಾಯತಿ ಸದಸ್ಯ ರಾಧಾಕೃಷ್ಣ ಭಟ್ ಉದ್ಘಾಟಿಸಿದರು..
ಮೀಯಪದವು ಶಾಲಾ ಮುಖ್ಯೋಪಾಧ್ಯಾಯ ಅರವಿಂದಾಕ್ಷ ಭಂಡಾರಿ, ಟಿ.ಎಸ್.ಸಿ. ಅಧ್ಯಕ್ಷ ಸದಾಶಿವ ಮಾಸ್ತರ್, ಪ್ರಧಾನ ಕಾರ್ಯದರ್ಶಿ ನಿರಂಜನ್ ರೈ ಪೆರಡಾಲ, ಕೋಶಾಧಿಕಾರಿ ಪ್ರದೀಪ್ ಕುಮಾರ್ ಶೆಟ್ಟಿ ಬೇಳ, ರಘುವೀರ್ ಮಾಸ್ತರ್, ಗೌರವ ಅಧ್ಯಕ್ಷ ಉದಯಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.