ನವದೆಹಲಿ: ಸುಪ್ರೀಂ ಕೋರ್ಟ್‌ನ 75ನೇ ವಾರ್ಷಿಕೋತ್ಸವದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಹೊಸ ಧ್ವಜ ಮತ್ತು ಲಾಂಛನವನ್ನು ಅನಾವರಣಗೊಳಿಸಿದ್ದಾರೆ.
ನವದೆಹಲಿ: ಸುಪ್ರೀಂ ಕೋರ್ಟ್‌ನ 75ನೇ ವಾರ್ಷಿಕೋತ್ಸವದ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ಹೊಸ ಧ್ವಜ ಮತ್ತು ಲಾಂಛನವನ್ನು ಅನಾವರಣಗೊಳಿಸಿದ್ದಾರೆ.
ಹೊಸ ಧ್ವಜವು ದೇಶದ ಸಂವಿಧಾನ, ಅಶೋಕ ಚಕ್ರ, ಸುಪ್ರೀಂ ಕೋರ್ಟ್‌ನ ಸಾಂಪ್ರದಾಯಿಕ ಕಟ್ಟಡವನ್ನು ಒಳಗೊಂಡಿದೆ.
ದ್ರೌಪದಿ ಮುರ್ಮು ಮಾತನಾಡಿ, 'ನಮ್ಮ ನ್ಯಾಯಾಂಗ ವ್ಯವಸ್ಥೆಯ ಮುಂದೆ ಅನೇಕ ಸವಾಲುಗಳಿವೆ. ಅದಕ್ಕಾಗಿ ಎಲ್ಲರೂ ಒಟ್ಟಾಗಿ ಸಂಘಟಿತ ಪ್ರಯತ್ನ ಮಾಡಬೇಕಾಗುತ್ತದೆ. ಉದಾಹರಣೆಗೆ, ಸಾಕ್ಷಿಗಳು ಮತ್ತು ಸಾಕ್ಷಿಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ನ್ಯಾಯಾಂಗ, ಸರ್ಕಾರ ಮತ್ತು ಪೊಲೀಸರು ಜಂಟಿಯಾಗಿ ಪರಿಹರಿಸಬೇಕು' ಎಂದು ತಿಳಿಸಿದ್ದಾರೆ.
'ಇತ್ತೀಚಿನ ದಿನಗಳಲ್ಲಿ ಸಮಯೋಚಿತ ಆಡಳಿತ, ಮೂಲಸೌಕರ್ಯ, ತರಬೇತಿ ಮತ್ತು ಮಾನವ ಸಂಪನ್ಮೂಲದ ಲಭ್ಯತೆಯಲ್ಲಿ ತಕ್ಕಮಟ್ಟಿಗೆ ಸುಧಾರಣೆಯಾಗಿದೆ. ಆದರೆ, ಈ ಎಲ್ಲಾ ಕ್ಷೇತ್ರಗಳಲ್ಲಿ ತ್ವರಿತಗತಿಯಲ್ಲಿ ಇನ್ನಷ್ಟು ಸುಧಾರಣೆ ಮಾಡಬೇಕಾಗಿದೆ. ಹಾಗೆಯೇ ಇತ್ತೀಚಿನ ವರ್ಷಗಳಲ್ಲಿ ಆಯ್ಕೆ ಸಮಿತಿಗಳಲ್ಲಿನ ಮಹಿಳೆಯರ ಸಂಖ್ಯೆ ಹೆಚ್ಚಾಗಿರುವುದು ಸಂತಸ ಮೂಡಿಸಿದೆ' ಎಂದು ಮುರ್ಮು ಅಭಿಪ್ರಾಯಪಟ್ಟಿದ್ದಾರೆ.