ನವದೆಹಲಿ: ನ್ಯಾಯಮೂರ್ತಿ ನಿತಿನ್ ಜಾಮ್ದಾರ್ ಅವರನ್ನು ಕೇರಳ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಿ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಅವರು ಬಾಂಬೆ ಹೈಕೋರ್ಟ್‍ನ ನ್ಯಾಯಾಧೀಶರು.
ನ್ಯಾಯಮೂರ್ತಿ ನಿತಿನ್ ಜಾಮ್ದಾರ್ ಅವರು ಕೇರಳ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯಾಗಿ ಶೀಘ್ರದಲ್ಲೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಮದು ತಿಳಿದುಬಂದಿದೆ.
ಬಾಂಬೆ ಹೈಕೋರ್ಟ್‍ನ ನ್ಯಾಯಮೂರ್ತಿ ಕೆಆರ್ ಶ್ರೀರಾಮ್ ಅವರನ್ನು ಮದ್ರಾಸ್ ಹೈಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಿ ಅಧಿಸೂಚನೆಯನ್ನೂ ಹೊರಡಿಸಲಾಗಿದೆ. ಕೇರಳ ಮತ್ತು ಮದ್ರಾಸ್ ಹೈಕೋರ್ಟ್‍ಗಳ ಹೊರತಾಗಿ ಇನ್ನೂ ಆರು ಹೈಕೋರ್ಟ್‍ಗಳಿಗೆ ಹೊಸ ಮುಖ್ಯ ನ್ಯಾಯಮೂರ್ತಿಗಳನ್ನು ನೇಮಿಸಲಾಗಿದೆ.
ಮುಂದಿನ ವಾರ ಹೈಕೋರ್ಟ್‍ಗಳಲ್ಲಿ ಮುಖ್ಯ ನ್ಯಾಯಮೂರ್ತಿ ನೇಮಕ ವಿಳಂಬದ ವಿರುದ್ಧದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಪರಿಗಣಿಸಲಿರುವ ಸಂದರ್ಭದಲ್ಲಿ ಕೇಂದ್ರವು ಅಧಿಸೂಚನೆ ಹೊರಡಿಸಿದೆ.
ನ್ಯಾಯಮೂರ್ತಿ ಮನಮೋಹನ್ ದೆಹಲಿ ಹೈಕೋರ್ಟ್, ನ್ಯಾಯಮೂರ್ತಿ ರಾಜೀವ್ ಶಕ್ದರ್ ಹಿಮಾಚಲ ಪ್ರದೇಶ ಹೈಕೋರ್ಟ್ ಮತ್ತು ನ್ಯಾಯಮೂರ್ತಿ ಸುರೇಶ್ ಕುಮಾರ್ ಕೀತ್ ಮಧ್ಯಪ್ರದೇಶ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಲಿದ್ದಾರೆ.