ಪಟ್ನಾ: ಆರ್‌ಜೆಡಿಯ ಮಾಜಿ ಶಾಸಕ ಹಾಗೂ ಐಎಎಸ್ ಅಧಿಕಾರಿಯೊಬ್ಬರ ವಿರುದ್ಧ ದಾಖಲಾಗಿರುವ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಶೋಧ ಕಾರ್ಯಾಚರಣೆ ನಡೆಸಿರುವ ಜಾರಿ ನಿರ್ದೇಶನಾಲಯ (ಇ.ಡಿ) ₹90 ಲಕ್ಷ ನಗದು ಹಾಗೂ 13 ಕೆ.ಜಿ ಬೆಳ್ಳಿಯನ್ನು ವಶಪಡಿಸಿಕೊಂಡಿದೆ.

ಮಾಜಿ ಶಾಸಕ ಗುಲಾಬ್ ಯಾದವ್ ಹಾಗೂ ಬಿಹಾರ ಕೇಡರ್‌ನ ಐಎಎಸ್ ಅಧಿಕಾರಿ ಸಂಜೀವ್ ಹನ್ಸ್ ಸೇರಿದಂತೆ ಇತರರ ವಿರುದ್ಧದ ಪ್ರಕರಣ ಇದಾಗಿದೆ.
ಮುಂಬೈ, ಕೋಲ್ಕತ್ತ ಹಾಗೂ ದೆಹಲಿಯಲ್ಲಿ ಹನ್ಸ್ ಅವರ ಸಹಚರರಿಗೆ ಸಂಬಂಧಿಸಿದ ಸ್ಥಳಗಳಲ್ಲಿ ಈಚೆಗೆ ಎರಡು ದಿನ ಶೋಧ ನಡೆಸಲಾಗಿದೆ ಎಂದು ಇ.ಡಿ ತಿಳಿಸಿದೆ.
1997ರ ಬ್ಯಾಚ್‌ನ ಐಎಎಸ್ ಅಧಿಕಾರಿ ಸಂಜೀವ್ ಹನ್ಸ್, ಬಿಹಾರ ಇಂಧನ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ.
ಈ ಪ್ರಕರಣದಲ್ಲಿ ಕಳೆದ ಜುಲೈನಲ್ಲಿ ಮೊದಲ ಬಾರಿಗೆ ಶೋಧ ನಡೆಸಿದ್ದ ಇ.ಡಿ 12ಕ್ಕೂ ಅಧಿಕ ದುಬಾರಿ ವಾಚ್‌ಗಳು, ಒಂದು ಕೆ.ಜಿ ಚಿನ್ನಾಭರಣ ಹಾಗೂ ಕೆಲವು ಹೂಡಿಕೆ ಪತ್ರಗಳನ್ನು ವಶಪಡಿಸಿಕೊಂಡಿತ್ತು.
ಹನ್ಸ್ ಹಾಗೂ ಗುಲಾಬ್ ಯಾದವ್ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಆರೋಪದ ಮೇಲೆ ಪೊಲೀಸರು ದಾಖಲಿಸಿದ್ದ ಎಫ್‌ಐಆರ್ ಅನ್ನು ಕಳೆದ ಆಗಸ್ಟ್‌ನಲ್ಲಿ ಪಟ್ನಾ ಹೈಕೋರ್ಟ್ ರದ್ದುಗೊಳಿಸಿತ್ತು.