ಬದಿಯಡ್ಕ: ಜೀರ್ಣೋದ್ಧಾರಗೊಳ್ಳುತ್ತಿರುವ ಎಡನೀರು ಸಮೀಪದ ಮೋಪಾಲ ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಸ್ವಾಮಿಯ ಪ್ರಸಾದ ರೂಪವಾಗಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ನೀಡಿದ ಐದು ಲಕ್ಷ ರೂಪಾಯಿಗಳನ್ನು ಶ್ರೀದೇವರ ಸನ್ನಿಧಿಯಲ್ಲಿ ಹಸ್ತಾಂತರಿಸಲಾಯಿತು.
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾಸರಗೋಡು ಜಿಲ್ಲಾ ಯೋಜನಾಧಿಕಾರಿ ಮುಖೇಶ್, ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ನವೀನ್ ಕುಮಾರ್ ಭಟ್ ಕುಂಜರಕಾನ ಅವರಿಗೆ ಚೆಕ್ ನೀಡಿದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಕೆ.ಎಂ. ಶರ್ಮ ಎಡನೀರು, ವಾಮನ ಆಚಾರ್ಯ ಬೋವಿಕ್ಕಾನ, ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ, ಸದಸ್ಯರು ಜೊತೆಗಿದ್ದರು.