ಇಂಫಾಲ: ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಸಮುದಾಯದ ನಡುವೆ ಮತ್ತೆ ಹಿಂಸಾಚಾರ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಇಂಫಾಲ: ಮಣಿಪುರದಲ್ಲಿ ಮೈತೇಯಿ ಮತ್ತು ಕುಕಿ ಸಮುದಾಯದ ನಡುವೆ ಮತ್ತೆ ಹಿಂಸಾಚಾರ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.
ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಕುಕಿ ಸಮುದಾಯದ ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಮಹಿಳೆಯೊಬ್ಬರು ಮೃತಪಟ್ಟಿದ್ದು, ಆಕೆಯ ಮಗಳು ಗಂಭೀರವಾಗಿ ಗಾಯಗೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.
ಮತ್ತೊಂದು ಘಟನೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಜನಾಂಗೀಯ ಸಂಘರ್ಷ ಪೀಡಿತ ಮಣಿಪುರದಲ್ಲಿ ಶಾಂತಿ ಮರುಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪೊಲೀಸರು ಈಚೆಗೆ ಅಶ್ರುವಾಯು ಶೆಲ್ ದಾಳಿ ನಡೆಸಿದ್ದರು. ಇದರಿಂದ ಮೈತೇಯಿ ಸಮುದಾಯಕ್ಕೆ ಸೇರಿದ ಎಂಟು ಜನರು ಮತ್ತು ವಿಡಿಯೊ ಪತ್ರಕರ್ತರೊಬ್ಬರು ಗಾಯಗೊಂಡಿದ್ದರು.
ಕುಕಿ ಮತ್ತು ಮೈತೇಯಿ ಜನಾಂಗಗಳ ನಡುವೆ ಸಂಘರ್ಷ ಆರಂಭವಾದಾಗಿನಿಂದ 226 ಜನರು ಮೃತಪಟ್ಟಿದ್ದು, 60,000ಕ್ಕೂ ಹೆಚ್ಚು ಜನರು ಸ್ಥಳಾಂತರಗೊಂಡಿದ್ದಾರೆ.