ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬೆಳಗ್ಗೆ ಮೂರು ದಿನಗಳ ಅಮೆರಿಕ ಪ್ರವಾಸಕ್ಕೆ ತೆರಳಿದರು.
ಅಮೆರಿಕ ಪ್ರವಾಸದ ವೇಳೆ ಕ್ವಾಡ್ ಶೃಂಗಸಭೆ, ಸಮುದಾಯ ಕಾರ್ಯಕ್ರಮ, ಮತ್ತು ಇತರ ದ್ವಿಪಕ್ಷೀಯ ಸಭೆಗಳಲ್ಲಿ ಭಾಗವಹಿಸುವುದಾಗಿ ಪ್ರಧಾನಿ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಸೆ.22ರಂದು ಭಾರತೀಯ ಸಮುದಾಯದವರ ಜೊತೆ ಮಾತುಕತೆ ನಡೆಸಲಿದ್ದಾರೆ. ಹಾಗೂ ಸೆ.23ರಂದು ಅವರು ವಿಶ್ವಸಂಸ್ಥೆಯಲ್ಲಿ ವಿವಿಧ ದೇಶಗಳ ನಾಯಕರ ಜೊತೆ ಸಭೆ ನಡೆಸಲಿದ್ದಾರೆ.
ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಶಾಂತಿ, ಸಮೃದ್ಧಿಗಾಗಿ ಕೆಲಸ ಮಾಡುವ ಪ್ರಮುಖ ಗುಂಪಾಗಿ ಕ್ವಾಡ್ ಹೊರಹೊಮ್ಮಿದೆ' ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಮೋದಿ ಅದ್ಭುತ ವ್ಯಕ್ತಿ. ಅವರು ಅಮೆರಿಕಕ್ಕೆ ಬಂದಾಗ ಅವರನ್ನು ಭೇಟಿಯಾಗುತ್ತೇನೆ ಎಂದು ಟ್ರಂಪ್ ಕಳೆದ ಹೇಳಿದ್ದರು. ಈ ಇಬ್ಬರು ನಾಯಕರು ಭೇಟಿಯಾಗುವ ಸಾಧ್ಯತೆ ಇದೆ.