ಕಾಸರಗೋಡು: ಜಿಲ್ಲಾ ಉದ್ಯೋಗ ವಿನಿಮಯ ಮತ್ತು ಉದ್ಯೋಗ ಕೇಂದ್ರದ ಆಶ್ರಯದಲ್ಲಿ 'ಪ್ರಯುಕ್ತಿ'ಉಚಿತ ಉದ್ಯೋಗ ಮೇಳ ಸೆ.28ರಂದು ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ ಜರುಗಲಿದೆ. ಸಂಸದ ರಾಜಮೋಹನ್ ಉಣ್ಣಿತ್ತಾನ್ ಮೇಳ ಉದ್ಘಾಟಿಸುವರು. ಶಾಸಕ ಎನ್.ಎ.ನೆಲ್ಲಿಕುನ್ನು ಅಧ್ಯಕ್ಷತೆ ವಹಿಸುವರು. ಜಿಲ್ಲಾಧಿಕಾರಿ ಕೆ. ಇನ್ಬಾಶೇಖರ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. 40 ಕ್ಕೂ ಹೆಚ್ಚು ಉದ್ಯೋಗದಾತರು ಭಾಗವಹಿಸುವ ಉದ್ಯೋಗ ಮೇಳದಲ್ಲಿ ಖಾಸಗಿ ಸಂಸ್ಥೆಗಳಿಂದ 1000 ಕ್ಕೂ ಹೆಚ್ಚು ಖಾಲಿ ಹುದ್ದೆಗಳನ್ನು ವರದಿ ಮಾಡುವ ನಿರೀಕ್ಷೆಯಿದೆ. ಆಸಕ್ತ ಅಭ್ಯರ್ಥಿಗಳು ಕಾಸರಗೋಡು ಸರ್ಕಾರಿ ಕಾಲೇಜಿನಲ್ಲಿ ಬೆಳಗ್ಗೆ 9.30ಕ್ಕೆ ಪ್ರಮಾಣಪತ್ರ ಮತ್ತು ಬಯೋಡೇಟಾಗಳೊಂದಿಗೆ ಹಾಜರಾಗಬೇಕು. ಅಭ್ಯರ್ಥಿಗಳು ಗೂಗಲ್ ಫಾರ್ಮ್ (:https://forms.gle/BbS3XwQtpi67obe6A) ಅಥವಾ ಸ್ಪಾಟ್ ನೋಂದಣಿ ಮೂಲಕ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಈ ಬಗ್ಗೆ ಮಾಹಿತಿಗಾಗಿದೂರವಾಣಿ ಸಂಖ್ಯೆ(9207155700, 04994255582)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.