ಬೈರೂತ್: ಹಿಜ್ಬುಲ್ಲಾ ಕೇಂದ್ರ ಭಾಗವನ್ನು ಗುರಿಯಾಗಿಸಿ ವ್ಯಾಪಕ ದಾಳಿ ನಡೆಸಿರುವುದಾಗಿ ಇಸ್ರೇಲ್ ಸೇನೆ ತಿಳಿಸಿದೆ.
ಬೈರೂತ್: ಹಿಜ್ಬುಲ್ಲಾ ಕೇಂದ್ರ ಭಾಗವನ್ನು ಗುರಿಯಾಗಿಸಿ ವ್ಯಾಪಕ ದಾಳಿ ನಡೆಸಿರುವುದಾಗಿ ಇಸ್ರೇಲ್ ಸೇನೆ ತಿಳಿಸಿದೆ.
ಬೈರೂತ್‌ನ ದಕ್ಷಿಣ ಉಪನಗರಗಳಲ್ಲಿ ಹಿಜ್ಬುಲ್ಲಾ ಮುಖ್ಯಸ್ಥ ಹಸನ್ ನಸ್ರಲ್ಲಾನನ್ನು ಗುರಿಯಾಗಿಸಿ ಇಸ್ರೇಲ್ ದಾಳಿ ನಡೆಸಿದೆ ಎಂದು ಇಸ್ರೇಲ್‌ನ ಮೂರು ಪ್ರಮುಖ ಟಿ.ವಿ ಚಾನೆಲ್‌ಗಳು ವರದಿ ಮಾಡಿವೆ.
ಇಸ್ರೇಲ್ ನಡೆಸಿದ ಸರಣಿ ದಾಳಿಯಲ್ಲಿ ಅನೇಕ ಕಟ್ಟಡಗಳು ನೆಲಸಮಗೊಂಡಿವೆ.
ಕಳೆದ ಒಂದು ವರ್ಷದಲ್ಲಿ ಲೆಬನಾನ್ ರಾಜಧಾನಿಯಲ್ಲಿ ಸಂಭವಿಸಿದ ಅತಿ ದೊಡ್ಡ ಸ್ಫೋಟದಲ್ಲಿ ಇಬ್ಬರು ಮೃತಪಟ್ಟಿದ್ದು, ಅನೇಕ ಮಂದಿ ಗಾಯಗೊಂಡಿದ್ದಾರೆ ಎಂದು ಲೆಬನಾನ್ ಆರೋಗ್ಯ ಸಚಿವಾಲಯ ತಿಳಿಸಿದೆ.
ಏತನ್ಮಧ್ಯೆ ಅಮೆರಿಕ ಪ್ರವಾಸವನ್ನು ಅರ್ಧದಲ್ಲೇ ಮೊಟಕುಗೊಳಿಸಿರುವ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸ್ವದೇಶಕ್ಕೆ ಪ್ರಯಾಣ ಬೆಳೆಸಿದ್ದಾರೆ.
ಈ ಮೊದಲು ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡಿದ್ದ ಅವರು, 'ಹಿಜ್ಬುಲ್ಲಾ ವಿರುದ್ಧದ ಕಾರ್ಯಾಚರಣೆ ಮುಂದುವರಿಯಲಿದೆ' ಎಂದು ಹೇಳಿದ್ದರು.