ಕಾಸರಗೋಡು : ಪಾಂಗೋಡು ಶ್ರೀ ದುರ್ಗಾಪರಮೇಶ್ವರೀಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವ ಅಕ್ಟೋಬರ್ 3ರಿಂದ 12ರ ವರೆಗೆ ಜರುಗಲಿದೆ. ಹಾರ್ನಾಡು ಪದ್ಮನಾಭ ತಂತ್ತಿಗಳ ಮಾರ್ಗದರ್ಶನದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕøತಿಕ ಹಾಗೂ ಸಾಹಿತ್ಯ ಕಾರ್ಯಕ್ರಮಗಳೊಂದಿಗೆ ಉತ್ಸವ ನಡೆಯಲಿದೆ.
ಅ.3ರಂದು ಬೆಳಗ್ಗೆ 11ಕ್ಕೆ ಶ್ರೀಕ್ಷೇತ್ರದ ಪಾತ್ರಿಗಳಾದ ಪಾಂಗೋಡು ಪ್ರವೀಣ ನಾಯಕ್ ದೀಪ ಪ್ರಜ್ವಲನಗೊಳಿಸುವರು. ಕಾಸರಗೋಡಿನ ಮಲ್ಲಿಕಾರ್ಜುನ ಕ್ಷೇತ್ರದ ಆಡಳಿತ ಸಮಿತಿಯ ಸದಸ್ಯ ಡಾ. ಕೆ ಎನ್ ವೆಂಕಟ್ರಮಣ ಹೊಳ್ಳ ಅಧ್ಯಕ್ಷತೆ ವಹಿಸುವರು. ಕರ್ನಾಟಕ ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಕ್ಯಾ. ಗಣೇಶ ಕಾರ್ಣಿಕ್ ಉದ್ಘಾಟಿಸುವರು. ಕೋಟೆ ವೀರಾಂಜನೇಯ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ಡಾ. ಅನಂತ ಕಾಮತ್ ಗೌರವ ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಉದ್ಯಮಿ ರಾಮ್ ಪ್ರಸಾದ್, ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಡಾ. ಮಂಜುಳಾ ಅನಿಲ್ ರಾವ್, ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಎ. ಆರ್ ಸುಬ್ಬಯ್ಯಕಟ್ಟೆ, ಕಸಾಪ ಕೇರಳ ಗಡಿನಾಡ ಘಟಕದ ಅಧ್ಯಕ್ಷ ಡಾ. ಜಯಪ್ರಕಾಶ ನಾರಾಯಣ ತೊಟ್ಟೆತ್ತೋಡಿ, ಧಾರ್ಮಿಕ ಮುಖಂಡ ಅರಿಬೈಲ್ ಗೋಪಾಲ ಶೆಟ್ಟಿ, ಶ್ರೀಧರ ಶೆಟ್ಟಿ ಮುಟ್ಟಂ, ಕಾಸರಗೋಡು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರವಿ ನಾಯ್ಕಾಪು, ಶಿಕ್ಷಣ ತಜ್ಞ ವಿಶಾಲಾಕ್ಷ ಪುತ್ರಕಳ ಮೊದಲಾದವರು ಅತಿಥಿಗಳಾಗಿ ಭಾಗವಹಿಸುವರು. ನಂತರ ಸಂಕೀರ್ತನಾ ಸಾಮ್ರಾಟ ಜಯಾನಂದ ಕುಮಾರ್ ಹೊಸದುರ್ಗ ಅವರ ಸಾರಥ್ಯದಲ್ಲಿ 11ನೇ ವರ್ಷದ ದಸರಾ ಸಂಕೀರ್ತನಾ ದಶಾಹ ಉದ್ಘಾಟನೆಗೊಳ್ಳುವುದು. ಧಾರ್ಮಿಕ ಮುಂದಾಳು ಸವಿತಾ ಟೀಚರ್ ಶುಭಾಶಂಸನೆ ಮಾಡುವರು. ಉತ್ಸವದ ಅಂಗವಾಗಿ ಪ್ರತೀದಿನ ವಿವಿಧ ಭಜನಾ ತಂಡಗಳಿಂದ ಭಜನೆ, ವಇವಿಧ ಸಾಂಸ್ಕøತಿಕ, ಧಾರ್ಮಿಕ ಕಾರ್ಯಕ್ರಮ ನಡೆಯಲಿದೆ.