ನವದೆಹಲಿ: ನಟಿಯೊಬ್ಬರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ಸಿದ್ದಿಕ್ ಅವರಿಗೆ ಸುಪ್ರೀಂ ಕೋರ್ಟ್ ಇಂದು (ಸೋಮವಾರ) ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ನವದೆಹಲಿ: ನಟಿಯೊಬ್ಬರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಟ ಸಿದ್ದಿಕ್ ಅವರಿಗೆ ಸುಪ್ರೀಂ ಕೋರ್ಟ್ ಇಂದು (ಸೋಮವಾರ) ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಈ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೇರಳ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸಿದ್ದಿಕ್ ಅವರ ಮನವಿಯ ಕುರಿತು ಸುಪ್ರೀಂ ಕೋರ್ಟ್ ಕೇರಳ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಸಿದ್ದಿಕ್ ಅವರ ಅರ್ಜಿಯನ್ನು 62 ನೇ ಪ್ರಕರಣ ಎಂದು ಪಟ್ಟಿ ಮಾಡಲಾಗಿದೆ. ಸಿದ್ದಿಕ್ ಪರ ಹಿರಿಯ ವಕೀಲ ಮುಕುಲ್ ರೋಹ್ಟಕಿ ವಾದ ಮಂಡಿಸಿದ್ದರು.
ಸೆಪ್ಟೆಂಬರ್ 24 ರಂದು ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿದ ನಂತರ ಸಿದ್ದಿಕ್ ತಲೆಮರೆಸಿಕೊಂಡಿದ್ದರು. ಇದರ ಬೆನ್ನಲ್ಲೇ ನಿನ್ನೆ ಮಾಧ್ಯಮಗಳು ಸೇರಿದಂತೆ ಸಿದ್ದಿಕ್ ವಿರುದ್ಧ ಪೋಲೀಸರು ಲುಕ್ ಔಟ್ ನೋಟಿಸ್ ಜಾರಿ ಮಾಡಿದ್ದರು. ಪೋಲೀಸರು ವಿವಿಧ ಮಲಯಾಳಂ ಮತ್ತು ಇಂಗ್ಲಿಷ್ ಪತ್ರಿಕೆಗಳಲ್ಲಿ ಸಿದ್ದಿಕ್É್ಪೂೀಟೋ ಒಳಗೊಂಡ ಲುಕ್ ಔಟ್ ನೋಟಿಸ್ ಪ್ರಕಟಿಸಿದ್ದಾರೆ.
ಕಳೆದ ತಿಂಗಳು ಸಿದ್ದಿಕ್ ವಿರುದ್ಧ ಪ್ರಕರಣ ದಾಖಲಾಗಿದ್ದರೂ ಪೋಲೀಸರು ಅವರನ್ನು ಬಂಧಿಸಲು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಯುವ ನಟಿಯೇ ಮಾಧ್ಯಮಗಳ ಮೂಲಕ ಸಿದ್ದಿಕ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದರು. ಆರೋಪದ ನಂತರ ಸಿದ್ದಿಕ್ ಮಲಯಾಳಂ ಚಿತ್ರರಂಗದ ತಾರೆಯರ ಸಂಘಟನೆಯಾದ ಅಮ್ಮಾದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.