ಕಾಸರಗೋಡು: ಜ್ವರ ಬಾಧಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಶಿಕ್ಷಕಿ, ಹೊಸದುರ್ಗ ಮಡಿಕೈ ಕಾರ್ಯಾಂಗೋಡ್ ನಿವಾಸಿ ಸುರೇಂದ್ರನ್ ಎಂಬವರ ಪತ್ನಿ ಎಂ. ಮಂಜುಷಾ(38)ಮಂಗಳೂರಿನ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ. ಪನಂಗಾಡ್ ಕಿರಿಯ ಪ್ರಥಮಿಕ ಶಾಲೆಯಲ್ಲಿ ತಾತ್ಕಾಲಿಕ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ಜ್ವರ ತಗುಲಿದ ಇವರನ್ನು ಹೊಸದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಕೆ ಕಂಡುಬಾರದ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ, ಪ್ರಯೋಜನವಾಗಿರಲಿಲ್ಲ.