ವಡೋದರಾ: ಗುಜರಾತ್‌ನ ವಡೋದರಾ ಜಿಲ್ಲೆಯ ದಬಕಾ ಗ್ರಾಮದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಮಂಟಪ ಸಿದ್ಧಪಡಿಸುತ್ತಿದ್ದ ವೇಳೆ ವಿದ್ಯುತ್ ತಗುಲಿ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ರಾತ್ರಿ 11.45ರ ಸುಮಾರಿಗೆ ಗ್ರಾಮಸ್ಥರೆಲ್ಲ ಸೇರಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಮಂಟಪ ಸಿದ್ಧಪಡಿಸುತ್ತಿದ್ದರು. ಇದೇ ಸಂದರ್ಭದಲ್ಲಿ ವಿದ್ಯುತ್ ಅವಘಡ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮೃತ ವ್ಯಕ್ತಿಯನ್ನು ಪ್ರಕಾಶ್ ಜಾಧವ್ ಎಂದು ಗುರುತಿಸಲಾಗಿದೆ. ಜಾಧವ್ ಹಿಡಿದಿದ್ದ ಕಬ್ಬಿಣದ ರಾಡ್ ಹೈಟೆನ್ಷನ್ ತಂತಿಗೆ ತಗುಲಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.