ಕೋಲ್ಕತ್ತ: ಕೋಲ್ಕತದ ನೂತನ ಪೊಲೀಸ್ ಕಮಿಷನರ್ ಆಗಿ ಮನೋಜ್ ಕುಮಾರ್ ವರ್ಮಾ ಅವರನ್ನು ನೇಮಕ ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಪ್ರಸ್ತುತ ಕಮಿಷನರ್ ಆಗಿದ್ದ ವಿನೀತ್ ಗೋಯಲ್ ಅವರನ್ನು ವಿಶೇಷ ಕಾರ್ಯಪಡೆಯ (ಎಸ್‌ಟಿಎಫ್) ಎಡಿಜಿ ಮತ್ತು ಐಜಿಪಿಯನ್ನಾಗಿ ವರ್ಗಾವಣೆ ಮಾಡಲಾಗಿದೆ.
ಕೋಲ್ಕತ್ತದ ಆರ್,ಜಿ.ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯ ವಿದ್ಯಾರ್ಥಿನಿ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನೀತ್ ಗೋಯಲ್ ಅವರು ಸೂಕ್ತ ರೀತಿಯಲ್ಲಿ ಕ್ರಮಕೈಗೊಂಡಿಲ್ಲ ಎಂದು ಪ್ರತಿಭಟನೆಗಳು ನಡೆದ ಬೆನ್ನಲ್ಲೇ ಮನೋಜ್ ಕುಮಾರ್ ವರ್ಮಾ ಅವರನ್ನು ಕೋಲ್ಕತ್ತದ ನೂತನ ಪೊಲೀಸ್ ಕಮಿಷನರ್ ಆಗಿ ಪಶ್ಚಿಮ ಬಂಗಾಳ ಸರ್ಕಾರ ಆದೇಶ ಹೊರಡಿಸಿದೆ.
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಪ್ರತಿಭಟನೆ ನಿರತ ವೈದ್ಯರೊಂದಿಗೆ ಸೋಮವಾರ ಮಾತುಕತೆ ನಡೆಸಿದ ಬೆನ್ನಲ್ಲೇ ಈ ಆದೇಶವನ್ನು ಪ್ರಕಟಿಸಲಾಗಿದೆ.