ಮುಂಬೈ: ಮುಂಬರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಬಿಜೆಪಿ ಕಾರ್ಯತಂತ್ರ ರೂಪಿಸುತ್ತಿದ್ದು, ಇದರ ಭಾಗವಾಗಿ ಪ್ರಧಾನಿ ಮೋದಿ ಅವರು ಇಂದು (ಗುರುವಾರ) ರಾಜ್ಯಕ್ಕೆ ಭೇಟಿ ನೀಡಬೇಕಿದ್ದ ಕಾರ್ಯಕ್ರಮವು ಭಾರಿ ಮಳೆಯಿಂದಾಗಿ ರದ್ದುಗೊಂಡಿದೆ ಮೂಲಗಳು ತಿಳಿಸಿವೆ.
ಪುಣೆಯಲ್ಲಿ ಮೆಟ್ರೊ ರೈಲು ಸೇವೆ ಸೇರಿದಂತೆ ರಾಜ್ಯದ ವಿವಿಧ ಯೋಜನೆಗಳಿಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಬುಧವಾರ ಸುರಿದ ಭಾರಿ ಮಳೆಯಿಂದಾಗಿ ಕಾರ್ಯಕ್ರಮ ನಿಗದಿಯಾಗಿದ್ದ ಮೈದಾನದ ತುಂಬಾ ನೀರು ತುಂಬಿಕೊಂಡಿದೆ. ಪುಣೆ ಮತ್ತು ಮುಂಬೈನಲ್ಲಿ ಇಂದೂ ಸಹ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬುಧವಾರ ಕಾಲೇಜು ಮೈದಾನಕ್ಕೆ ಭೇಟಿ ನೀಡಿ ಕಾರ್ಯಕ್ರಮದ ಸಿದ್ಧತೆಗಳನ್ನು ಪರಿಶೀಲಿಸಿದ್ದರು.