ತಿರುವನಂತಪುರಂ: ತಮ್ಮ ವಿರುದ್ಧದ ಆರೋಪಗಳೆಲ್ಲ ಕಪೋಲಕಲ್ಪಿತ ಎಂಬುದು ತನಿಖೆಯಿಂದ ಸಾಬೀತಾದರೆ ಆರೋಪ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಎಡಿಜಿಪಿ ಎಂ.ಆರ್.ಎಂ.ಆರ್.ಅಜಿತ್ ಕುಮಾರ್ ಹೇಳಿದ್ದು, ಈ ಕುರಿತು ಎಡಿಜಿಪಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಈ ಆರೋಪಗಳು ತನಗೆ ಮತ್ತು ಕುಟುಂಬಕ್ಕೆ ಕಳಂಕ ತಂದಿದೆ. ನಿರಪರಾಧಿ ಎಂದು ಸಾಬೀತಾದರೆ ಸರ್ಕಾರ ಪ್ರಕರಣ ದಾಖಲಿಸಬೇಕು. ಸರ್ಕಾರವೇ ಸೆಷÀನ್ಸ್ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಬಹುದು ಎಂಬುದು ಸೇರಿದಂತೆ ಕಾನೂನು ಪ್ರಕ್ರಿಯೆಗಳ ವಿವರಗಳನ್ನೂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಇದೇ ವೇಳೆ ಎಡಿಜಿಪಿ ವಿರುದ್ಧ ಶಾಸಕ ಪಿ.ವಿ.ಅನ್ವರ್ ಮಾಡಿರುವ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ. ವಿಶೇಷ ತನಿಖಾ ತಂಡ ಎಡಿಜಿಪಿ ಹೇಳಿಕೆ ಪಡೆಯಲು ಮುಂದಾಗಿರುವಾಗಲೇ ಅಜಿತ್ ಕುಮಾರ್ ಮುಖ್ಯಮಂತ್ರಿಗೆ ಪತ್ರ ರವಾನಿಸಿದ್ದಾರೆ.
ಅಜಿತ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಅನ್ವರ್ ಈ ಹಿಂದೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು.