ಅಲಿಭಾಗ್: ಕುಟುಂಬದವರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಮಹಿಳೆಯೊಬ್ಬರು ಭಾರಿ ಮಳೆಯಿಂದಾಗಿ ಜಲಪಾತದಲ್ಲಿ ಕೊಚ್ಚಿ ಹೋದ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ನಡೆದಿದ್ದಾಗಿ ಪೊಲೀಸರು ಗುರುವಾರ ತಿಳಿಸಿದ್ದಾರೆ.
ಅಲಿಭಾಗ್: ಕುಟುಂಬದವರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಮಹಿಳೆಯೊಬ್ಬರು ಭಾರಿ ಮಳೆಯಿಂದಾಗಿ ಜಲಪಾತದಲ್ಲಿ ಕೊಚ್ಚಿ ಹೋದ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ನಡೆದಿದ್ದಾಗಿ ಪೊಲೀಸರು ಗುರುವಾರ ತಿಳಿಸಿದ್ದಾರೆ.
22 ವರ್ಷದ ಕ್ಷೀರಸಾಗರ ಎಂಬುವರೇ ಮೃತರು.
ಖೊಪೋಲಿಯ ನಿವಾಸಿಗಳಾದ ಮಹಿಳೆ ಮತ್ತು ಆಕೆಯ ಕುಟುಂಬ ಸದಸ್ಯರು ಜಲಪಾತದ ಬುಡದಲ್ಲಿರುವ ನೀರಿನ ಕೊಳದಲ್ಲಿ ಇರುವಾಗ, ಭಾರಿ ಮಳೆಯಿಂದಾಗಿ ನೀರಿನ ಹರಿವು ಹೆಚ್ಚಾಗಿದೆ. ಈ ವೇಳೆ ಆಯತಪ್ಪಿ ಮಹಿಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಅವರ ಕುಟುಂಬದ ನಾಲ್ವರು ಕೈಕೈ ಹಿಡಿದುಕೊಂಡು ದಡ ಸೇರಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ನಂತರ ಪೊಲೀಸರು ಸೇತುವೆಯ ಕೆಳಭಾಗದಲ್ಲಿ ಶವವನ್ನು ಪತ್ತೆ ಹಚ್ಚಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.