ಸಮರಸ ಚಿತ್ರಸುದ್ದಿ: ಮಧೂರು: ಕೇಂದ್ರ ಸಚಿವ ಶ್ರೀಪಾದ ವೈ ಯಸ್ಸೋ ನಾಯಕ್ ಭಾನುವಾರ ಕುಂಬಳೆ ಸೀಮೆಯ ಪ್ರಮುಖ ದೇವಾಲಯಗಳಲ್ಲಿ ಒಂದಾದ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿ, ಶ್ರೀದೇವರ ದರ್ಶನ ಪಡೆದರು. ಈ ಸಂದರ್ಭ ದೇವ್ಸಥಾನದ ಕಾರ್ಯನಿರ್ವಹಣಾಧಿಕಾರಿ ಟಿ ರಾಜೇಶ್, ನವೀಕರಣ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯದೇವ ಖಂಡಿಗೆ ಮೊದಲಾದ ಗಣ್ಯರು ಸಚಿವರನ್ನು ಬರಮಾಡಿಕೊಂಡರು. ಈ ಸಂದರ್ಭ ದೇವಸ್ಥಾನದ ನವೀಕರಣ, ಬ್ರಹ್ಮಕಲಶೋತ್ಸವದ ಬಗ್ಗೆ ಸಚಿವರಿಗೆ ಮಾಹಿತಿ ನೀಡಲಾಯಿತು.