ಬದಿಯಡ್ಕ: ಇತಿಹಾಸ ಪ್ರಸಿದ್ಧ ಪೆರಡಾಲ ಶ್ರೀ ಉದನೇಶ್ವರ ಕ್ಷೇತ್ರ ಜೀರ್ಣೋದ್ಧಾರ ಕಾರ್ಯಗಳು ತ್ವರಿತಗತಿಯಲ್ಲಿ ಸಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶ್ರೀ ಉದನೇಶ್ವರ ಪ್ರಸಾದ್ ಮೂಲಡ್ಕ ರಚಿಸಿದ ಶ್ರೀ ಪೆರಡಾಲದೇವ ಭಕ್ತಿ ಗೀತೆ ದ್ವನಿಸುರುಳಿ ಬಿಡುಗಡೆ ಸಮಾರಂಭ ಶ್ರೀ ಕ್ಷೇತ್ರ ಪೆರಡಾಲದಲ್ಲಿ ನಿನ್ನೆ ಜರಗಿತು. ಕ್ಷೇತ್ರದ ಪ್ರಧಾನ ಅರ್ಚಕ ಶಿವಪ್ರಸಾದ್ ಕಿಳಿoಗಾರ್ ವಿಶೇಷ ಪ್ರಾರ್ಥನೆ ಯೊಂದಿಗೆ ಶ್ರೀ ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ನ್ಯಾಯವಾದಿ ವೆಂಕಟರಮಣ ಭಟ್ ಚಂಬಲ್ತಿಮ್ಮಾರ್ ಬಿಡುಗಡೆಗೊಳಿಸಿದರು.
ಆಡಳಿತ ಮಂಡಳಿ ಸದಸ್ಯ ಜೀರ್ಣೋದ್ಧಾರ ಸಮಿತಿ ಪ್ರಧಾನ ಕಾರ್ಯದರ್ಶಿ ಪಿ.ಜಿ. ಜಗನ್ನಾಥ ರೈ, ಸದಸ್ಯ ಸೀತಾರಾಮ ನವಕಾನ, ಸೇವಾ ಸಮಿತಿ ಪ್ರಧಾನ ಕಾರ್ಯದರ್ಶಿ ನಿರಂಜನ ರೈ ಪೆರಡಾಲ, ಕೋಶಾಧಿಕಾರಿ ಸೂರ್ಯನಾರಾಯಣ. ಬಿ, ಮಾಜಿ ಮೊಕ್ತೇಸರ ಪಿ.ಜಿ. ಚಂದ್ರಹಾಸ.ರೈ, ಕರ್ನಾಟಕ ಬ್ಯಾಂಕ್ ಪ್ರಬಂಧಕ ಶ್ರೀರಾಮ್ ಪ್ರಸಾದ್ ಮಾತೃಪಾಡಿ, ಕಾರ್ಯದರ್ಶಿ ಗಣೇಶ ಪ್ರಸಾದ್ ಕಡಪ್ಪು, ಯುವ ಸಮಿತಿಯ ಅಧ್ಯಕ್ಷ ಡಾ. ಶ್ರೀಶ ಕುಮಾರ ಪಂಜಿತಡ್ಕ, ಕಾರ್ಯದರ್ಶಿ ಭಾಸ್ಕರ, ಲೆಕ್ಕ ಪರಿಶೋಧಕ ಸತೀಶ ಪುದ್ಯೋಡು, ಅರ್ಚಕವೃಂದ ಸಿಬ್ಬಂದಿ ವರ್ಗ ವಿವಿಧ ಸಮಿತಿಯ ಸದಸ್ಯರು ಭಕ್ತರು ಉಪಸ್ಥಿತರಿದ್ದರು.