ಕಾಸರಗೋಡು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಕಾಸರಗೋಡು ತಾಲೂಕು ವತಿಯಿಂದ ಜ್ಞಾನವಿಕಾಸ ಕಾರ್ಯಕ್ರಮದನ್ವಯ ಆರೋಗ್ಯ ತಪಾಸಣಾ ಉಚಿತ ಶಿಬಿರ ಉಳಿಯತ್ತಡ್ಕ ಶ್ರೀಶಕ್ತಿ ಭಜನಾಮಂದಿರದಲ್ಲಿ ಜರುಗಿತು.
ಮಂಗಳೂರು ಅತ್ತಾವರ ಕೆ.ಎಂ.ಸಿ ಆಸ್ಪತ್ರೆ ಸಹಯೋಗ ಹಾಗೂ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಕಾಸರಗೋಡು ವಲಯ, ಶ್ರೀ ಶಕ್ತಿ ಭಜನಾ ಮಂದಿರ ಮತ್ತು ಭಜರಂಗ್ ಬಲಿ ವ್ಯಾಯಾಮ ಶಾಲೆ ಗಣೇಶನಗರ ಉಳಿಯತಡ್ಕ ಇವರ ಸಹಕಾರದಲ್ಲಿ ಶಿಬಿರ ಆಯೋಜಿಸಲಾಗಿತ್ತು. ಶ್ರೀ ಶಕ್ತಿ ಭಜನಾ ಮಂದಿರ ಸಮಿತಿ ಉಪಾಧ್ಯಕ್ಷ ಭರತ್ ಕುಮಾರ್ ಗಟ್ಟಿ ಉದ್ಘಾಟಿಸಿದರು. ಕೇಂದ್ರ ಒಕ್ಕೂಟ ಅಧ್ಯಕ್ಷ ಜ್ಞಾನೇಶ್ವರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು. ಕೆಎಂಸಿ ಆಸ್ಪತ್ರೆ ಅತ್ತಾವರದ ಸಾರ್ವಜನಿಕ ಸಂಪರ್ಕ ಅಧಿಕಾರಿ ಹರ್ಬರ್ಟ್ ಅವರು ಆರೋಗ್ಯ ಶಿಬಿರದ ಬಗ್ಗೆ ಮಾಹಿತಿ ನೀಡಿದರು.
ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ತಾಲೂಕ ಅಧ್ಯಕ್ಷ ಅಖಿಲೇಶ್ ನಗುಮುಗಂ, ಸಾಹಿತಿ ರಾಧಾಕೃಷ್ಣ ಉಳಿಯತಡ್ಕ, ಮತ್ತು ತಾಲೂಕು ಯೋಜನಾಧಿಕಾರಿ ಮುಖೇಶ್ ಅತಿಥಿಗಳಾಗಿ ಭಾಗವಹಿಸಿದ್ದರು.ವಲಯದ ಮೇಲ್ವಿಚಾರಕರಾದ ಶ್ರೀಮತಿ ಸ್ವಾಗತಿಸಿದರು. ಜ್ಞಾನ ವಿಕಾಸ ಸಮನ್ವಯಾಧಿಕಾರಿ ಸೌಮ್ಯ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ಜ್ಯೋತಿ ವಂದಿಸಿದರು. ಶಿಬಿರದಲ್ಲಿ ಕಣ್ಣಿನ ತಪಾಸಣೆಯೊಂದಿಗೆ ಕನ್ನಡಕ ವಿತರಣೆ,ಸಾಮಾನ್ಯ ರೋಗ ವಿಭಾಗ, ಸ್ತ್ರೀರೋಗ ವಿಭಾಗ, ಕೀಲು ಮತ್ತು ಗಂಟು ನೋವು ವಿಭಾಗ,ಕಿವಿ ಮೂಗು ಗಂಟಲು ವಿಭಾಗದ ವೈದ್ಯರು ತಪಾಸಣೆ ನಡೆಸಿದರು.