ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕಥುವಾ ಜಿಲ್ಲೆಯಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥರಾಗಿದ್ದಾರೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಕಥುವಾ ಜಿಲ್ಲೆಯಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡುತ್ತಿದ್ದ ವೇಳೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಸ್ವಸ್ಥರಾಗಿದ್ದಾರೆ.
ಕೂಡಲೇ ವೇದಿಕೆಯಲ್ಲಿದ್ದ ನಾಯಕರು ಮಲ್ಲಿಕಾರ್ಜುನ ಖರ್ಗೆ ಅವರ ಕೈ ಹಿಡಿದು ಕೂರಿಸಿದ್ದಾರೆ.
ಬಿಜೆಪಿ ನಾಯಕರು ಎಂದಿಗೂ ಚುನಾವಣೆ ನಡೆಸಲು ಬಯಸುವುದಿಲ್ಲ. ಒಂದು ವೇಳೆ ಚುನಾವಣೆ ನಡೆಸಲು ಬಯಸಿದ್ದೇ ಆದಲ್ಲಿ ಒಂದೆರಡು ವರ್ಷಗಳಲ್ಲಿ ಮಾಡುತ್ತಾರೆ. ಸುಪ್ರೀಂ ಕೋರ್ಟ್‌ನ ಆದೇಶ ಹಾಗೂ ಲೆಫ್ಟಿನೆಂಟ್ ಗವರ್ನರ್ ಮೂಲಕ ರಿಮೋಟ್ ಕಂಟ್ರೋಲ್ ಸರ್ಕಾರವನ್ನು ನಡೆಸಲು ಬಯಸುತ್ತಾರೆ ಎಂದು ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
'ಕಳೆದ 10 ವರ್ಷಗಳಲ್ಲಿ ಪ್ರಧಾನಿ ಮೋದಿ ಅವರು ದೇಶದ ಯುವಕರಿಗೆ ಏನನ್ನೂ ಮಾಡಿಲ್ಲ. 10 ವರ್ಷಗಳಲ್ಲಿ ನಿಮ್ಮ ಅಭ್ಯುದಯವನ್ನು ಮರಳಿ ತರಲು ಸಾಧ್ಯವಾಗದ ವ್ಯಕ್ತಿ ನಿಮ್ಮ ಮುಂದೆ ಮತ್ತೆ ಬಂದರೆ, ಅವರನ್ನು ತಪ್ಪದೆ ಪ್ರಶ್ನಿಸಿ' ಎಂದು ಅವರು ಕರೆ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯು 90 ಸದಸ್ಯರ ಬಲವನ್ನು ಹೊಂದಿದ್ದು, ಸೆಪ್ಟೆಂಬರ್ 18, 25ರಂದು ಮೊದಲೆರಡು ಹಂತದ ಮತದಾನ ನಡೆದಿದೆ. ಅಕ್ಟೋಬರ್ 1ರಂದು ಮೂರನೇ ಹಂತದ ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.
ಹೆಚ್ಚಿನ ಮಾಹಿತಿ ಅಪ್ಡೇಟ್ ಮಾಡಲಾಗುವುದು.