HEALTH TIPS

ಹೆದ್ದಾರಿ ನಿರ್ಮಾಣ-ಭೂಕುಸಿತ ವಲಯದಲ್ಲಿ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಕುರಿತು ಸಮಗ್ರ ವರದಿಗೆ ಆಗ್ರಹ

      


              ಕಾಸರಗೋಡು: ಅತಿವೃಷ್ಟಿಯಿಂದ ಭೂಕುಸಿತ ಸಂಭವಿಸುವ ಅಪಾಯವಿರುವ ಚಟ್ಟಂಚಾಲ್‍ನಿಂದ ಚೆರ್ಕಳವರೆಗಿನ ರಾಷ್ಟ್ರೀಯ ಹೆದ್ದಾರಿ 66ರ ವೀರಮಲಕುನ್ನು, ಮಟ್ಟಲಾಯಿಕುನ್ನು ಮುಂತಾದ ಪ್ರದೇಶಗಳ ಸುರಕ್ಷತೆಗೆ ಕೈಗೊಂಡಿರುವ ಕ್ರಮಗಳ ಕುರಿತು ಸಮಗ್ರ ವರದಿ ಸಲ್ಲಿಸುವಂತೆ ಜಿಲ್ಲಾ ಅಭಿವೃದ್ಧಿ ಸಮಿತಿ ಸಭೆ ಅಧಿಕಾರಿಗಳಿಗೆ ಸೂಚನೆ ನೀಡಿದೆ. 

             ಜಿಲ್ಲಾಧಿಕಾರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ಇನ್ಬಾಶೇಖರ್ ಅಧ್ಯಕ್ಷತೆ ವಹಿಸಿದ್ದರು.

           ಕರ್ನಾಟಕ ಶಿರೂರು, ವಯನಾಡ್ ಮುಂಡಕಯಂ ಮತ್ತು ಚೂರಲ್ಮಲ ದುರಂತ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿಯೂ ಮುಂಜಾಗ್ರತೆ ಅಗತ್ಯ ಎಂದು ಜನಪ್ರತಿನಿಧಿಗಳು ತಿಳಿಸಿದ್ದಾರೆ

           ರಕ್ಷಣಾ ಗೋಡೆಗಳನ್ನು ನಿರ್ಮಿಸಲು ತಜ್ಞ ಸಂಸ್ಥೆಗಳಿಂದ ನಿಖರವಾದ ತಾಂತ್ರಿಕ ಅಧ್ಯಯನ ವರದಿ ಅಗತ್ಯ ಮತ್ತು ಮಣ್ಣಿನ ತಪಾಸಣಾ ವರದಿ ಲಭ್ಯವಾಗುವಂತೆ ಸಭೆಯಲ್ಲಿ ಸೂಚಿಸಲಾಯಿತು. ಶಾಸಕರಾದ ಎನ್.ಎ.ನೆಲ್ಲಿಕುನ್, ಇ.ಚಂದ್ರಶೇಖರನ್, ಎಂ.ರಾಜಗೋಪಾಲ್, ಎ.ಕೆ.ಎಂ ಅಶ್ರಫ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪಿ.ಬೇಬಿ ಬಾಲಕೃಷ್ಣನ್, ಕಾಸರಗೋಡು ನಗರಸಭಾ ಅಧ್ಯಕ್ಷ ಅಬ್ಬಾಸ್ ಬೀಗಂ ಅವರು ಸಭೆಯಲ್ಲಿ ವಿಷಯ ಪ್ರಸ್ತಾಪಿಸಿದರು.

            ಕಾಸರಗೋಡು ನಗರಸಭೆ ಕಟ್ಟಡವನ್ನು ಹೊಸ ಸ್ಥಳದಲ್ಲಿ ನಿರ್ಮಿಸಲು ತನಿಖಾ ಪ್ರಕ್ರಿಯೆ ಚುರುಕುಗೊಳಿಸಬೇಕು ಎಂದು ಶಾಸಕ ಎನ್.ಎ.ನೆಲ್ಲಿಕುನ್ನು ಆಗ್ರಹಿಸಿದರು. ಲೋಕೋಪಯೋಗಿ ಕಟ್ಟಡ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಮಾತನಾಡಿ, ಹೊಸದಾಗಿ ಕಂಡುಕೊಳ್ಳಲಾಗಿರುವ ಜಾಗದಲ್ಲಿ ಹಲವು ಮರಗಳಿದ್ದು, ಈ ಬಗ್ಗೆ ಸ್ಪಷ್ಟತೆ ಕಂಡುಕೊಳ್ಳಲು ಗ್ರಾಮಾಧಿಕಾರಿ ಕಚೇರಿಯಿಂದ ಸ್ಕೆಚ್ ಲಭ್ಯವಾಗುವಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು.

           ಪನತ್ತಡಿ-ರಾಣಿಪುರಂ ರಸ್ತೆಯಲ್ಲಿ ನಡೆಯುತ್ತಿರುವ ಅಪಘಾತಗಳ ಬಗ್ಗೆ ಪೆÇಲೀಸರು ಕಟ್ಟುನಿಟ್ಟಿನ ತಪಾಸಣೆ ನಡೆಸಬೇಕು. ಜಿಲ್ಲೆಯ ಪ್ರಮುಖ ಕಡಲತೀರಗಳಲ್ಲಿ ಜೀವರಕ್ಷಣೆಗಾಗಿ ಗುತ್ತಿಗೆದಾರರ ಹೊಣೆಗಾರಿಕೆಯಲ್ಲಿ ಜೀವರಕ್ಷಕರನ್ನು ನೇಮಿಸಲು ಕ್ರಮಕೈಗೊಳ್ಳಬೇಕು. 

           ಮಂಗಳೂರು ಮಾರ್ಗವಾಗಿ ಸಂಚರಿಸುವ ಕೆಎಸ್‍ಆರ್‍ಟಿಸಿ ಬಸ್‍ಗಳು ರಾಷ್ಟ್ರೀಯ ಹೆದ್ದಾರಿಯ ಸರ್ವೀಸ್ ರಸ್ತೆಯಲ್ಲಿ ಸಂಚರಿಸದಿರುವುದು ಸಾರ್ವಜನಿಕರಿಗೆ ಸಮಸ್ಯೆಯನ್ನುಂಟುಮಾಡುತ್ತಿದೆ ಎಂದು ಶಾಸಕರು ತಿಳಿಸಿದರು. ಸರ್ವೀಸ್ ರಸ್ತೆಯಲ್ಲಿ ಬಸ್ ಓಡಿಸದ ಚಾಲಕರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಕೆಎಸ್‍ಆರ್‍ಟಿಸಿ ಪ್ರತಿನಿಧಿ ತಿಳಿಸಿದ್ದಾರೆ.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries