ಕಾಸರಗೋಡು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಇಲಾಖೆಗಳ ಜಿಲ್ಲಾ ಮಟ್ಟದಲ್ಲಿ ವಿವಿಧ ಅಭಿವೃದ್ಧಿ ಚಟುವಟಿಕೆಗಳ ತ್ವರಿತ ಅನುಷ್ಠಾನಕ್ಕಾಗಿ ಆಡಳಿತಾತ್ಮಕ ಮತ್ತು ತಾಂತ್ರಿಕ ಅನುಮತಿ ನೀಡಲು ಜಿಲ್ಲಾ ಮಟ್ಟದಲ್ಲಿ ವ್ಯವಸ್ಥೆ ಕಲ್ಪಿಸಲಗುವುದು ಎಂದು ಪ.ಜಾತಿ-ಪ.ಪಂಗಡ ಹಾಗೂ ಹಿಂದುಳಿದ ಕಲ್ಯಾಣ ಖಾತೆ ಸಚಿವ ಓ.ಆರ್ ಕೇಳು ತಿಳಿಸಿದರು.
ಅವರು ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ, ಹಿಂದುಳಿದ ಕಲ್ಯಾಣ ಇಲಾಖೆಗಳ ಜಿಲ್ಲಾ ಮಟ್ಟದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿ ಮಟ್ಟದಲ್ಲಿ ಪರಿಶೀಲಿಸಲಾಗುವುದು. ಒಂದು ಕೋಟಿ ರೂಪಾಯಿವರೆಗಿನ ಯೋಜನೆಗಳಿಗೆ ಅನುಮತಿ ನೀಡಲು. ತಾಂತ್ರಿಕ ಅನುಮೋದನೆ ನೀಡಲು ಸ್ಥಳೀಯ ಸ್ವ-ಆಡಳಿತ ಇಲಾಖೆಯ ಕಾರ್ಯಪಾಲಕ ಅಭಿಯಂತರರನ್ನೊಳಗೊಂಡ ತಜ್ಞರ ಸಮಿತಿಯನ್ನು ನೇಮಿಸುವ ಪ್ರಸ್ತಾವನೆಯೂ ಪರಿಶೀಲನೆಯಲ್ಲಿದೆ ಎಂದು ಸಚಿವರು ತಿಳಿಸಿದರು.
ನಿವೇಶನ ರಹಿತ ವಸತಿ ರಹಿತ ಕುಟುಂಬಗಳಿಗೆ ನಿವೇಶನ ಹಾಗೂ ಹಕ್ಕುಪತ್ರ ದೊರಕಿಸಲು ಕ್ರಮಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಸಾಸಕರಾದ ಎನ್.ಎ ನೆಲ್ಲಿಕುನ್ನು, ಸಿ.ಎಚ್ ಕುಞಂಬು, ಎಂ. ರಆಜಗೋಪಾಲನ್, ಎ.ಕೆ.ಎಂ ಅಶ್ರಫ್, ಇ.ಚಂದ್ರಶೇಖರನ್ ಅವರ ಪ್ರತಿನಿಧಿ ಪದ್ಮನಾಭನ್ ತಮ್ಮ ಕ್ಷೇತ್ರಗಳಲ್ಲಿನ ಪ-ಜಾತಿ-ಪ.ವರ್ಗ ಸಮುದಾಯದ ವಿವಿಧ ಸಮಸ್ಯೆಗಳನ್ನು ಸಚಿವರಿಗೆ ಮನವರಿಕೆ ಮಾಡಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪಿ ಬೇಬಿ ಬಾಲಕೃಷ್ಣನ್, ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಬಿಪಿನ್‍ದಾಸ್, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಹೆಚ್ಚುವರಿ ನಿರ್ದೇಶಕ ಟಿ. ಸಜೀವನ್, ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಅಭಿವೃದ್ಧಿ ಇಲಾಖೆ ಸಚಿವರ ಆಪ್ತ ಕಾರ್ಯದರ್ಶಿ ಶಿವಕುಮಾರ್, ಜಿಲ್ಲಾ ಪರಿಶಿಷ್ಟ ಜಾತಿ ಅಭಿವೃದ್ಧಿ ಅಧಿಕಾರಿ ರವಿರಾಜ್, ಕಾಸರಗೋಡು ಪರಿಶಿಷ್ಟ ಪಂಗಡ ಅಭಿವೃದ್ಧಿ ಅಧಿಕಾರಿ ಎಂ ಮಲ್ಲಿಕಾ, ಪರಪ್ಪ ಪರಿಶಿಷ್ಟ ಪಂಗಡ ಅಭಿವೃದ್ಧಿ ಅಧಿಕಾರಿ ಎಂ ಅಬ್ದುಲ್‍ಸಲಾಂ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕೋಯಿಕ್ಕೋಡ್ ಪ್ರಾದೇಶಿಕ ಅಧಿಕಾರಿ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.