ಕೋಲ್ಕತ್ತ: ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ನ್ಯೂ ಮೇನಾಗುರಿ ರೈಲು ನಿಲ್ದಾಣದಲ್ಲಿ ಮಂಗಳವಾರ ಬೆಳಗ್ಗೆ ಗೂಡ್ಸ್ ರೈಲಿನ ಐದು ವ್ಯಾಗನ್‌ಗಳು ಹಳಿತಪ್ಪಿವೆ ಎಂದು ಈಶಾನ್ಯ ಗಡಿ ರೈಲ್ವೆ (ಎನ್‌ಎಫ್‌ಆರ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕೋಲ್ಕತ್ತ: ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ನ್ಯೂ ಮೇನಾಗುರಿ ರೈಲು ನಿಲ್ದಾಣದಲ್ಲಿ ಮಂಗಳವಾರ ಬೆಳಗ್ಗೆ ಗೂಡ್ಸ್ ರೈಲಿನ ಐದು ವ್ಯಾಗನ್‌ಗಳು ಹಳಿತಪ್ಪಿವೆ ಎಂದು ಈಶಾನ್ಯ ಗಡಿ ರೈಲ್ವೆ (ಎನ್‌ಎಫ್‌ಆರ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಳಗ್ಗೆ 6:20ಕ್ಕೆ ನಡೆದ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯಿಂದಾಗಿ ಈಶಾನ್ಯ ರಾಜ್ಯಗಳನ್ನು ಸಂಪರ್ಕಿಸುವ ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಹಲವು ರೈಲುಗಳನ್ನು ಮಾರ್ಗ ಬದಲಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ರೈಲು ಹಳಿತಪ್ಪಿದ ಕಾರಣ ಓವರ್‌ಹೆಡ್ ವಿದ್ಯುತ್ ಕಂಬಗಳು ಮತ್ತು ಕೇಬಲ್‌ಗಳಿಗೆ ಹಾನಿಯಾಗಿದೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆ ಸಂಬಂಧ ತನಿಖೆ ನಡೆಸಲಾಗುತ್ತಿದೆ. ಸಂಜೆ ವೇಳೆಗೆ ರೈಲು ಸಂಚಾರ ಪುನರಾರಂಭಗೊಳ್ಳುವ ನಿರೀಕ್ಷೆಯಿದೆ ಎಂದು ಎನ್‌ಎಫ್‌ಆರ್ ಅಧಿಕಾರಿ ತಿಳಿಸಿದ್ದಾರೆ.