ನಾಗ್ಪುರ: ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಜಬಲ್‌ಪುರದಿಂದ ತೆಲಂಗಾಣದ ಹೈದರಾಬಾದ್‌ಗೆ ತೆರಳುತ್ತಿದ್ದ ಇಂಡಿಗೊ ವಿಮಾನವನ್ನು ನಾಗ್ಪುರಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಗ್ಪುರ: ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಜಬಲ್‌ಪುರದಿಂದ ತೆಲಂಗಾಣದ ಹೈದರಾಬಾದ್‌ಗೆ ತೆರಳುತ್ತಿದ್ದ ಇಂಡಿಗೊ ವಿಮಾನವನ್ನು ನಾಗ್ಪುರಕ್ಕೆ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'6E-7308 ಇಂಡಿಗೊ ವಿಮಾನವು ಜಬಲ್‌ಪುರದಿಂದ ಹೈದರಾಬಾದ್‌ಗೆ ತೆರಳುತ್ತಿತ್ತು.
'ನಾಗ್ಪುರ ವಿಮಾನ ನಿಲ್ದಾಣದಲ್ಲಿ ಇಂಡಿಗೊ ವಿಮಾನದಲ್ಲಿದ್ದ ಪ್ರಯಾಣಿಕರನ್ನು ಕೆಳಗಿಳಿಸಿ, ತ್ವರಿತಗತಿಯಲ್ಲಿ ತಪಾಸಣೆ ನಡೆಸಲಾಯಿತು. ಬಾಂಬ್ ಇರಿಸಲಾಗಿದೆ ಎಂದು ಬರೆದಿರುವ ಕಾಗದವು ವಿಮಾನದ ಸ್ನಾನಗೃಹದಲ್ಲಿ ಪತ್ತೆಯಾಗಿದೆ. ಭದ್ರತಾ ಏಜೆನ್ಸಿಗಳ ಸಂಪೂರ್ಣ ಪರಿಶೀಲನೆಯ ಬಳಿಕ ವಿಮಾನದಲ್ಲಿ ಯಾವುದೇ ಅನುಮಾನಾಸ್ಪದ ವಸ್ತುಗಳು ಕಂಡುಬಂದಿಲ್ಲ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.