ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆ ಇಂದು (ಬುಧವಾರ) ಕದನ ವಿರಾಮ ಉಲ್ಲಂಘಿಸಿದ್ದು, ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ.
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಡಿ ನಿಯಂತ್ರಣ ರೇಖೆಯಲ್ಲಿ ಪಾಕಿಸ್ತಾನ ಸೇನೆ ಇಂದು (ಬುಧವಾರ) ಕದನ ವಿರಾಮ ಉಲ್ಲಂಘಿಸಿದ್ದು, ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ ಎಂದು ಸೇನೆಯ ಮೂಲಗಳು ತಿಳಿಸಿವೆ.
ಪಾಕಿಸ್ತಾನ ಸೇನೆ ನಡೆಸಿದ ದಾಳಿಯಲ್ಲಿ ಬಿಎಸ್‌ಎಫ್ ಯೋಧಯೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ವಿಧಾನಸಭಾ ಚುನಾವಣೆ ಹಿನ್ನೆಲೆ ಉಗ್ರರ ಒಳನುಸುಳದಂತೆ ತಡೆಯಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಬಿಎಸ್‌ಎಫ್ ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದರು. ಇದರ ಬೆನ್ನಲ್ಲೇ ಪಾಕ್ ಸೇನೆ ದಾಳಿ ನಡೆಸಿದೆ ಎನ್ನಲಾಗಿದೆ.
'ಪೊಲೀಸ್ ಸೇರಿದಂತೆ ಏಜೆನ್ಸಿಗಳ ಸಮನ್ವಯದಲ್ಲಿ ಬಿಎಸ್‌ಎಫ್, ಉಗ್ರ ಒಳನುಸುಳುವಿಕೆಯನ್ನು ತಡೆಯಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿರುವುದರಿಂದ ಗಡಿ ಪ್ರದೇಶ ಸಂಪೂರ್ಣ ಸುರಕ್ಷಿತವಾಗಿದೆ. ಚುನಾವಣೆ ನಡೆಯುವ ಸಂದರ್ಭದಲ್ಲಿ ಯಾವುದೇ ಕಾರಣಕ್ಕೂ ಭಯೋತ್ಪಾದಕ ಕೃತ್ಯಗಳಿಗೆ ಅವಕಾಶ ನೀಡುವುದಿಲ್ಲ' ಎಂದು ಬಿಎಸ್‌ಎಫ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 18ರಂದು ಮೊದಲ ಹಂತ, ಸೆ.25ರಂದು ಎರಡನೇ ಹಂತ ಮತ್ತು ಅಕ್ಟೋಬರ್ 01ರಂದು ಮೂರನೇ ಹಾಗೂ ಕೊನೆಯ ಹಂತದ ಮತದಾನ ನಡೆಯಲಿದೆ. ಅಕ್ಟೋಬರ್ 4ರಂದು ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.