ಕಾಸರಗೋಡು: ಜ್ವರ ಬಾಧಿಸಿ ಚಿಕಿತ್ಸೆಯಲ್ಲಿದ್ದ ಚಂದ್ರಗಿರಿ ಸರ್ಕಾರಿ ಹೈಯರ್ ಸೆಕೆಂಡರಿ ಶಾಲಾ ಪ್ಲಸ್‍ಟು ವಿದ್ಯಾರ್ಥಿನಿ ಎಸ್.ಎಂ. ವೈಷ್ಣವಿ(17)ಮಂಗಳವಾರ ಮೃತಪಟ್ಟಿದ್ದಾಳೆ. ಎರಡು ವಾರದ ಹಿಂದೆ ಜ್ವರ ತಗುಲಿದ ಬಾಲಕಿಯನ್ನು ಪರಿಯಾರಂ ವ್ಯದ್ಯಕೀಯ ಕಾಲೇಜು ಅಸ್ಪತ್ರೆಗೆ ದಾಖಲಿಸಲಾಗಿದ್ದು, ಚೇತರಿಕೆ ಕಾಣಿಸಿಕೊಳ್ಳದ ಹಿನ್ನೆಲೆಯಲ್ಲಿ ಕೋಯಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು.