HEALTH TIPS

ಭಗತ್‌ ಸಿಂಗ್‌ ಜನ್ಮದಿನ: ಪ್ರಧಾನಿ ಮೋದಿ, ರಾಹುಲ್‌ ಸೇರಿ ಗಣ್ಯರ ನಮನ

 ವದೆಹಲಿ: ಕ್ರಾಂತಿಕಾರಿ, ‌ಸ್ವಾತಂತ್ರ್ಯ ಹೋರಾಟಗಾರ ಭಗತ್‌ ಸಿಂಗ್‌ ಅವರ ಜನ್ಮದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ, ರಾಹುಲ್‌ ಗಾಂಧಿ ಸೇರಿದಂತೆ ಗಣ್ಯರು ಶನಿವಾರ ಗೌರವ ನಮನ ಸಲ್ಲಿಸಿದ್ದಾರೆ.


ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಭಗತ್ ಸಿಂಗ್ ಮಾತೃಭೂಮಿಗಾಗಿ ತಮ್ಮ ಪ್ರಾಣವನ್ನು ಬಲಿದಾನ ಮಾಡಿದರು.

ಅವರ ತ್ಯಾಗ ಮತ್ತು ಬಲಿದಾನ ಸದಾ ನೆನಪಿನಲ್ಲಿರುತ್ತದೆ ಎಂದು ತಿಳಿಸಿದ್ದಾರೆ.

'ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್ ಅವರ ತ್ಯಾಗ, ಧೈರ್ಯ ನಮ್ಮೆಲ್ಲರಿಗೂ ಸದಾ ಸ್ಫೂರ್ತಿದಾಯಕವಾದ್ದದ್ದು' ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ 'ಎಕ್ಸ್‌'ನಲ್ಲಿ ಬರೆದುಕೊಂಡಿದ್ದಾರೆ.

ದೇಶಕ್ಕಾಗಿ ಸರ್ವಸ್ವವನ್ನೂ ತ್ಯಾಗ ಮಾಡಿದ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಜನ್ಮದಿನದ ನಮಗಳು. ಸಮಾಜದಲ್ಲಿನ ವಿಭಜಕ ಶಕ್ತಿಗಳ ವಿರುದ್ಧ ನಿರಂತರವಾಗಿ ಹೋರಾಟ ನಡೆಸಿದ್ದರು. ಅಸಮಾನತೆಯ ವಿರುದ್ಧ ಧ್ವನಿ ಎತ್ತಿದ ಅವರ ಚಿಂತನೆಗಳು ಲಕ್ಷಾಂತರ ಯುವಕರಿಗೆ ಸ್ಫೂರ್ತಿಯ ಚಿಲುಮೆಯಾಗಿದೆ' ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 'ಎಕ್ಸ್‌'ನಲ್ಲಿ ಪೋಸ್ಟ್‌ ಮಾಡಿದ್ದಾರೆ.

'ಸ್ವಾತಂತ್ರ್ಯ ಚಳುವಳಿಯ ಅನರ್ಘ್ಯ ರತ್ನ, ಭಾರತ ಮಾತೆಯ ಹೆಮ್ಮೆಯ ಪುತ್ರ ಭಗತ್ ಸಿಂಗ್ ಅವರ ಧೈರ್ಯ, ಶೌರ್ಯ, ಸಾಹಸ ಎಲ್ಲರಿಗೂ ಪ್ರೇರಣೆ. ಅವರ ಜನ್ಮದಿನದಂದು ಶತ ಶತ ನಮನಗಳು' ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ ಎಕ್ಸ್‌ನಲ್ಲಿ ತಿಳಿಸಿದ್ದಾರೆ.

1907ರಲ್ಲಿ ತಮ್ಮ 23ನೇ ವಯಸ್ಸಿನಲ್ಲಿ ಭಗತ್ ಸಿಂಗ್ ಅವರನ್ನು ಬ್ರಿಟಿಷರು ಗಲ್ಲಿಗೇರಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries