ನವದೆಹಲಿ: ಬಿಜೆಡಿ ಸಂಸದ ಸುಜೀತ್ ಕುಮಾರ್ ಅವರು ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿಗಳ ನಡುವೆಯೇ ಇಂದು (ಶುಕ್ರವಾರ) ರಾಜ್ಯಸಭೆ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬೆಳವಣಿಗೆ ಒಡಿಶಾದಲ್ಲಿ 'ಆಪರೇಷನ್ ಕಮಲ' ಭರದಿಂದ ಸಾಗುತ್ತಿದೆ ಎಂಬುದಕ್ಕೆ ಮತ್ತಷ್ಟು ಪುಷ್ಟಿ ನೀಡಿದೆ.

ಸುಜೀತ್ ಕುಮಾರ್ ಅವರು ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ರಾಜೀನಾಮೆಯನ್ನು ಸಭಾಪತಿ ಅಂಗೀಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ಸುಜೀತ್ ಕುಮಾರ್ ಅವರನ್ನು ಬಿಜೆಡಿ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ.
ಮಮತಾ ಮೊಹಾಂತ ಅವರು ತೊರೆದ 37 ದಿನಗಳ ನಂತರ ಒಡಿಶಾದ ಮಾಜಿ ಸಿಎಂ ನವೀನ್ ಪಟ್ನಾಯಕ್ ಅವರ ಆಪ್ತ 49 ವರ್ಷದ ಸುಜೀತ್ ಕುಮಾರ್ ಬಿಜೆಡಿಗೆ ರಾಜೀನಾಮೆ ನೀಡಿದ್ದಾರೆ. ಕುಮಾರ್ ಅವರು ಬಿಜೆಪಿಗೆ ಸೇರ್ಪಡೆಯಾಗಿ ಮತ್ತೆ ಮೇಲ್ಮನೆ ಸ್ಥಾನ ಗಿಟ್ಟಿಸಿಕೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಕುಮಾರ್ ಅವರು ಎಂಜಿನಿಯರಿಂಗ್, ಕಾನೂನು ಮತ್ತು ವ್ಯವಹಾರ ಆಡಳಿತದಲ್ಲಿ ಪದವಿ ಪಡೆದಿದ್ದಾರೆ. 2020ರ ಏಪ್ರಿಲ್‌ನಲ್ಲಿ ರಾಜ್ಯಸಭೆಗೆ ಚುನಾಯಿತರಾಗಿದ್ದರು.
ರಾಜ್ಯಸಭೆಗೆ ಮೊಹಂತ ರಾಜೀನಾಮೆ ಸಲ್ಲಿಸಿದ ಬಳಿಕ ಆಗಸ್ಟ್ 29ರಂದು ವೈಎಸ್‌ಆರ್ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯರಾದ ಎಂ. ವೆಂಕಟರಮಣ ರಾವ್ ಮತ್ತು ಬೀದಾ ಮಸ್ತಾನ್ ರಾವ್ ಯಾದವ್ ಅವರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಅವರು ಎನ್. ಚಂದ್ರಬಾಬು ನಾಯ್ಡು ನೇತೃತ್ವದ ಟಿಡಿಪಿ ಸೇರುವ ಸಾಧ್ಯತೆ ಇದೆ ಎನ್ನಲಾಗಿತ್ತು.