HEALTH TIPS

ತ್ರಿಶ್ಶೂರ್: ರೈಲು ನಿಲ್ದಾಣದ ಮೇಲ್ಸೇತುವೆಯಲ್ಲಿ ನವಜಾತ ಶಿಶುವಿನ ಮೃತದೇಹ ಪತ್ತೆ

          ತ್ರಿಶ್ಶೂರ್: ಕೇರಳದ ತ್ರಿಶ್ಶೂರ್ ರೈಲು ನಿಲ್ದಾಣದ ಪಾದಚಾರಿ ಮೇಲ್ಸೇತುವೆಯಲ್ಲಿ ಎರಡು ದಿನದ ಶಿಶುವಿನ ಮೃತದೇಹ ಪತ್ತೆಯಾಗಿದೆ. ಮಗುವನ್ನು ಚೀಲದಲ್ಲಿರಿಸಿ ಯಾರೋ ಅಲ್ಲಿ ಇಟ್ಟು ಹೋಗಿದ್ದಾರೆ.

          ಚೀಲವನ್ನು ಮೊದಲು ಕಸ ಗುಡಿಸುವವರು ಗಮನಿಸಿದ್ದು, ಬಳಿಕ, ರೈಲ್ವೆ ಪೊಲೀಸ್ ಪಡೆಯ ಅಧಿಕಾರಿಗಳು ಬಂದು ಪರಿಶೀಲನೆ ನಡೆಸಿದ್ದಾರೆ.

          ಈ ವೇಳೆ ಅದರೊಳಗೆ ಎರಡು ದಿನದ ನವಜಾತ ಶಿಶುವಿನ ಮೃತದೇಹ ಕಂಡು ಬಂದಿದೆ.

'ಚೀಲದೊಳಗೆ ಎರಡು ದಿನ ಗಂಡು ಮಗುವಿನ ಶವ ಪತ್ತೆಯಾಗಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ' ಎಂದು ರೈಲ್ವೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

              ಈ ಬಗ್ಗೆ ರೈಲ್ವೆ ಪೊಲೀಸರು ಎಫ್‌ಐಆರ್‌ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಅಲ್ಲಿ ಚೀಲ ಇಟ್ಟವರ ಪತ್ತೆಗಾಗಿ ಪೊಲೀಸರು ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.

ಮಗುವಿನ ಮೃತದೇಹವನ್ನು ತ್ರಿಶ್ಶೂರ್ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದೆ‌.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries