ಪೆರ್ಲ: ಪೆರ್ಲ ನಾಲಂದ ಕಾಲೇಜಿನ ಅರ್ಥಶಾಸ್ತ್ರ ವಿಭಾಗ ಹಾಗೂ ನಾಲಂದ ಚಾರಿಟೇಬಲ್ ಟ್ರಸ್ಟ್ ಜಂಟಿ ಆಶ್ರಯದಲ್ಲಿ ಇಕೋ ಫೆಸ್ಟ್ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು.
ಕಾಲೇಜು ಪ್ರಾಂಶುಪಾಲ ಶಂಕರ ಖಂಡಿಗೆ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳ ಜೀವನದ ಅಭಿವೃದ್ಧಿಯಲ್ಲಿ ಸುಸ್ಥಿರ ಕ್ರಮಗಳು ಮಹತ್ತ್ವದ ಪಾತ್ರ ವಹಿಸುವುದು ಎಂದರು. ಚಾರ್ಟರ್ಡ್ ಅಕೌಂಟೆಂಟ್ ಅಬ್ದುಲ್ಲ ಮಾದುಮೂಲೆ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿ, ಪ್ರಖ್ಯಾತ ಅರ್ಥ ಶಾಸ್ತ್ರಜ್ಞರು ಮತ್ತು ಅವರ ಕೊಡುಗೆಗಳು, ಅರ್ಥಶಾಸ್ತ್ರದ ಇತ್ತೀಚಿನ ಪ್ರವೃತ್ತಿಗಳು ಹಾಗೂ ನೈಜ ಪ್ರಪಂಚದ ಸನ್ನಿವೇಶದ ಕುರಿತು ಮಾಹಿತಿ ನೀಡಿದರು.
ವಾಣಿಜ್ಯ ವಿಭಾಗದ ಮುಖ್ಯಸ್ಥ ಶ್ರೀನಿಧಿ ಕೆ. ಪ್ರಾಸ್ತಾವಿಕವಾಗಿ ಮಾತನಾಡಿದರು. ವಿದ್ಯಾರ್ಥಿಗಳಿಗೆ ಆಯೋಜಿಸಲಾದ ವಿವಿಧ ಸ್ಪರ್ಧೆಗಳ ಬಹುಮಾನಗಳನ್ನು ವಿತರಿಸಲಾಯಿತು. ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಅನುಪಮ ಟಿ. ಸ್ವಾಗತಿಸಿದರು. ಪ್ರಾಧ್ಯಾಪಕಿ ಅಶಾಲತ ಪಿ.ವಂದಿಸಿದರು. ವಿದ್ಯಾರ್ಥಿನಿ ಫಾತಿಮತ್ ಸಮ್ರತ್ ನಿರೂಪಿಸಿದರು. ವಿದ್ಯಾರ್ಥಿಗಳು, ಶಿಕ್ಷಕ ಸಿಬ್ಬಂದಿಗಳು ಉಪಸ್ಥಿತರಿದ್ದರು.