ಕೊಚ್ಚಿ: ಅತ್ಯಾಚಾರ ಪ್ರಕರಣದಲ್ಲಿ ನಟ ಹಾಗೂ ಶಾಸಕ ಮುಖೇಶ್ ಅವರನ್ನು ಬಂಧಿಸಲಾಗಿದೆ. ವಿಶೇಷ ತನಿಖಾ ತಂಡವು ಮುಖೇಶ್ ಅವರನ್ನು ವಿಚಾರಣೆ ನಡೆಸಿದ ನಂತರ ಬಂಧಿಸಿದೆ.
ಕೊಚ್ಚಿ ಮರೈನ್ ಡ್ರೈವ್ನಲ್ಲಿರುವ ಕಚೇರಿಯಲ್ಲಿ ನಡೆದ ವಿಚಾರಣೆ ಮೂರು ಗಂಟೆಗೂ ಹೆಚ್ಚು ಕಾಲ ನಡೆಯಿತು.
ಮುಕೇಶ್ ನಿರೀಕ್ಷಣಾ ಜಾಮೀನಿನ ಮೇಲೆ ಇರುವುದರಿಂದ ವೈದ್ಯಕೀಯ ಪರೀಕ್ಷೆ ಸೇರಿದಂತೆ ಪ್ರಕ್ರಿಯೆ ಮುಗಿಸಿ ಬಿಡುಗಡೆಯಾಗಲಿದ್ದಾರೆ. ಸಿನಿಮಾದಲ್ಲಿ ಅವಕಾಶ ಕೊಡಿಸಿ ಕಿರುಕುಳ ನೀಡಿದ್ದಾರೆ ಎಂದು ಆಲುವಾ ಮೂಲದ ನಟಿಯೊಬ್ಬರು ನೀಡಿದ ದೂರಿನ ಮೇರೆಗೆ ಮುಖೇಶ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಅತ್ಯಾಚಾರ, ಅತಿಕ್ರಮ ಪ್ರವೇಶ ಮತ್ತು ಮಹಿಳೆಯನ್ನು ಅವಮಾನಿಸುವಂತಹ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಈ ಪ್ರಕರಣದಲ್ಲಿ ಎರ್ನಾಕುಳಂ ಪ್ರಿನ್ಸಿಪಲ್ ಸೆಷನ್ಸ್ ಕೋರ್ಟ್ ಮುಖೇಶ್ಗೆ ನಿರೀಕ್ಷಣಾ ಜಾಮೀನು ನೀಡಿತ್ತು. ತನಿಖಾ ತಂಡವು ಕೇಳಿದಾಗಲೆಲ್ಲಾ ವಿಚಾರಣೆಗೆ ಹಾಜರಾಗಬೇಕು ಎಂಬ ಷರತ್ತಿನ ಮೇಲೆ ಜಾಮೀನು ನೀಡಲಾಗಿತ್ತು.