HEALTH TIPS

ಮಹಿಳಾ ಹಾಸ್ಟೆಲ್‌ನಲ್ಲಿ ರೆಫ್ರಿಜರೇಟರ್‌ ಸ್ಫೋಟ: ಇಬ್ಬರು ವಿದ್ಯಾರ್ಥಿನಿಯರ ಸಾವು

 ಧುರೈ: ತಮಿಳುನಾಡಿನ ಮಧುರೈನ ಮಹಿಳಾ ವಿದ್ಯಾರ್ಥಿ ನಿಲಯದಲ್ಲಿ ರೆಫ್ರಿಜರೇಟರ್ ಸ್ಫೋಟಗೊಂಡು ಇಬ್ಬರು ವಿದ್ಯಾರ್ಥಿನಿಯರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ.

'ಮೃತ ವಿದ್ಯಾರ್ಥಿನಿಯರನ್ನು ಪರಿಮಳಾ ಹಾಗೂ ಶರಣ್ಯಾ ಎಂದು ಗುರುತಿಸಲಾಗಿದೆ. ಘಟನೆಯು ಗುರುವಾರ ಮುಂಜಾನೆ ನಡೆದಿದೆ.

ಸ್ಫೋಟದ ಬೀಕರತೆಗೆ ಕಟ್ಟಡದಲ್ಲಿ ಬೆಂಕಿ ಹೊತ್ತಿಕೊಂಡು, ಹೊಗೆ ಆವರಿಸಿತ್ತು. ಒಳಗಿದ್ದವರನ್ನು ರಕ್ಷಿಸಲಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ' ಎಂದು ಮಧುರೈ ಜಿಲ್ಲಾಧಿಕಾರಿ ಎಂ.ಎಸ್. ಸಂಗೀತಾ ತಿಳಿಸಿದ್ದಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿರುವ ಮಾಹಿತಿ ತಂತ್ರಜ್ಞಾನ ಸಚಿವ ಪಿ. ತೈಗರಾಜನ್, 'ವಿದ್ಯಾರ್ಥಿನಿಯರಿಗೆ ಪರ್ಯಾಯ ವಸತಿ ಕಲ್ಪಿಸಲಾಗುವುದು. ಘಟನೆ ಕುರಿತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು' ಎಂದಿದ್ದಾರೆ.

ತಾತ್ಕಾಲಿಕ ಆಶ್ರಯ ತಾಣಕ್ಕೆ ಭೇಟಿ ನೀಡಿದ ತೈಗರಾಜನ್, ವಿದ್ಯಾರ್ಥಿನಿಯರೊಂದಿಗೆ ಸಮಾಲೋಚನೆ ನಡೆಸಿದರು. ಎಲ್ಲಾ ರೀತಿಯ ಸಹಕಾರ ನೀಡುವ ಭರವಸೆ ನೀಡಿದರು. ಘಟನೆ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.

'ಕಟ್ಟಡ ಹಳೆಯದಾಗಿದ್ದು, ಶಿಥಿಲಗೊಂಡಿತ್ತು. ಕಟ್ಟಡ ನೆಲಸಮಗೊಳಿಸಲು ಸ್ಥಳೀಯ ಸಂಸ್ಥೆ ನೋಟಿಸ್ ನೀಡಿತ್ತು. ಈ ಪ್ರಕರಣ ನ್ಯಾಯಾಲಯದಲ್ಲಿದೆ. ದಾಖಲೆಗಳನ್ನು ಪರಿಶೀಲಿಸಲಾಗಿದೆ. ತನಿಖೆ ಪ್ರಗತಿಯಲ್ಲಿದೆ' ಎಂದು ಜಿಲ್ಲಾಧಿಕಾರಿ ಹೇಳಿದರು.


Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries