ಕೋಲ್ಕತ್ತಾ: ಟ್ರೈನಿ ವೈದ್ಯೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಆರ್.ಜೆ.ವೈದ್ಯಕೀಯ ಕಾಲೇಜು ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಹಾಗೂ ಸ್ಥಳೀಯ ಪೊಲೀಸ್ ಠಾಣೆಯ ಪ್ರಭಾರಿ ಇನ್ಸ್ಪೆಕ್ಟರ್ ಅಭಿಜಿತ್ ಮಂಡಲ್ ಅವರನ್ನು ಸಿಬಿಐ ಶನಿವಾರ ಬಂಧಿಸಿದ್ದು, ಭಾನುವಾರ ನ್ಯಾಯಾಲಯಕ್ಕೆ ಹಾಜರುಪಡಿಸಿದರು.

ಅತ್ಯಾಚಾರ ಘಟನೆ ಬೆಳಕಿಗೆ ಬಂದ ನಂತರ ಇಬ್ಬರೂ ಪರಸ್ಪರ ಸಂಪರ್ಕದಲ್ಲಿದ್ದು, ಸಂದೀಪ್ ಗೆ ಹೇಗೆ ಪ್ರಕರಣದಲ್ಲಿ ಮುಂದುವರಿಯಬೇಕು ಎಂಬ ಸೂಚನೆಯನ್ನು ಅಭಿಜಿತ್ ನೀಡಿದ್ದರು ಎಂದು ಸಿಬಿಐ ನ್ಯಾಯಾಲಯದಲ್ಲಿ ಇವರಿಬ್ಬರನ್ನು ಹಾಜರುಪಡಿಸಿದಾಗ ತಿಳಿಸಿದೆ.
ಆಗಸ್ಟ್ 9 ರಂದು ಬೆಳಗ್ಗೆ 10 ಗಂಟೆಗೆ ವೈದ್ಯೆ ಸಾವಿನ ಬಗ್ಗೆ ಪೊಲೀಸ್ ಅಧಿಕಾರಿಗೆ ಮಾಹಿತಿ ಬಂದಿದೆ. ಆದರೆ, ರಾತ್ರಿ 11 ಗಂಟೆಗೆ ಎಫ್ಐಆರ್ ದಾಖಲಿಸಲಾಗಿದೆ. ಇವರಿಬ್ಬರೂ ಒಟ್ಟಾಗಿ ಅಪರಾಧವನ್ನು ಕಡಿಮೆ ಮಾಡಲು ಮತ್ತು ಸತ್ಯ ಮುಚ್ಚಿಡಲು ಪ್ರಯತ್ನಿಸಿದ್ದಾರೆ. ಇದು ಗಂಭೀರ ಪ್ರಕರಣವಾಗಿರುವುದರಿಂದ ಹತ್ಯೆಯನ್ನು ಪೊಲೀಸರು ಸುಮೋಟೋ ಪ್ರಕರಣವಾಗಿ ಪರಿಗಣಿಸಬೇಕಿತ್ತು ಎಂದು ಸಿಬಿಐ ನ್ಯಾಯಾಲಯದಲ್ಲಿ ಹೇಳಿದೆ.
ವೈದ್ಯಕೀಯ ಕಾಲೇಜಿನ ಹಣಕಾಸು ಅವ್ಯವಹಾರ ಪ್ರಕರಣದಲ್ಲಿ ಸಂದೀಪ್ರನ್ನು ಈಗಾಗಲೇ ಸಿಬಿಐ ಬಂಧಿಸಿದೆ. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.