ಕಾಸರಗೋಡು: ವಿಶ್ವಕರ್ಮ ಜಯಂತಿ ಅಂಗವಾಗಿ ರಾಷ್ಟ್ರೀಯ ಕಾರ್ಮಿಕರ ದಿನವನ್ನು ಕಾಸರಗೋಡು, ಉದುಮ ಮತ್ತು ಮಧೂರು ವಲಯ ಬಿಎಂಎಸ್ ಆಶ್ರಯದಲ್ಲಿ ಮಂಗಳವಾರ ಆಚರಿಸಲಾಯಿತು.
ವಿಶ್ವಕರ್ಮ ಜಯಂತಿ ಅಂಗವಾಗಿ ಕಾರ್ಯಕರ್ತರ ಬೃಹತ್ ರ್ಯಾಲಿ, ಸಮಾವೇಶ ಆಯೋಜಿಸಲಾಗಿತ್ತು. ಕಾಸರಗೋಡು ಕರಂದಕ್ಕಾಡಿನಿಂದ ಆರಂಭಗೊಂಡ ಕಾರ್ಯಕರ್ತರ ರ್ಯಾಲಿ ಮೀಪುಗುರಿಯಲ್ಲಿ ಸಮಾರೋಪಗೊಂಡಿತು. ಈ ಸಂದರ್ಭ ನಡೆದ ಸಭೆಯಲ್ಲಿ ಅಸಂಘಟಿತ ಕಾರ್ಮಿಕರ ಕಲ್ಯಾಣ ನಿಧಿಯ ಜಿಲ್ಲಾಧ್ಯಕ್ಷ ಹಾಗೂ ಬಿಎಂಎಸ್ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಎಂ. ಕೆ. ರಾಘವನ್ ಸಮಾರಂಭ ಉದ್ಘಾಟಿಸಿದರು. ಬಿಎಂಎಸ್ ಜಿಲ್ಲಾ ಜತೆ ಕಾರ್ಯದರ್ಶಿ ಗುರುದಾಸ್ ಚೇನಕೋಡ್ ಅಧ್ಯಕ್ಷತೆ ವಹಿಸಿದ್ದರು. ಬಿಎಂಎಸ್ ಜಿಲ್ಲಾ ಸಮಿತಿ ಅಧ್ಯಕ್ಷ ಉಪೇಂದ್ರ ಕೋಟೆಕಣ್ಣಿ, ಜಿಲ್ಲಾ ಜತೆ ಕಾರ್ಯದರ್ಶಿ ಸುರೇಶ್ ದೇಳಿ, ಕಾಸರಗೋಡು ವಲಯ ಕಾರ್ಯದರ್ಶಿ ರಿಜೇಶ್, ಮಧೂರು ವಲಯ ಕಾರ್ಯದರ್ಶಿ ಶ್ರೀಧರನ್ ಚೇನಕೋಡ್, ಮಧೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಗೋಪಾಲಕೃಷ್ಣ, ಮನೀಶ್ ಉಪಸ್ಥಿತರಿದ್ದರು. ಕಾಸರಗೋಡು ವಲಯ ಸಮಿತಿ ಅಧ್ಯಕ್ಷ ಬಾಲಕೃಷ್ಣನ್ ನೆಲ್ಲಿಕುನ್ನು ಸ್ವಾಗತಿಸಿದರು. ಉದುಮ ವಲಯ ಅಧ್ಯಕ್ಷ ಭಾಸ್ಕರನ್ ಪೆÇಯಿನಾಚಿ ವಂದಿಸಿದರು.