ಬದಿಯಡ್ಕ: ಕುಂಬಳೆ-ಬದಿಯಡ್ಕ ರಸ್ತೆಯಲ್ಲಿ ರಸ್ತೆ ಸಂಚಾರ ಮೊಟಕುಗೊಂಡು ಸಮಸ್ಯೆಯಾದ ಘಟನೆ ನಡೆದಿದೆ. ಕಾಸರಗೋಡು ಚಂದ್ರಗಿರಿ ಮಾರ್ಗದಲ್ಲಿ ಸಂಪೂರ್ಣ ಸಂಚಾರ ನಿಷೇಧಿಸಿದ ಹಿನ್ನೆಲೆಯಲ್ಲಿ ಮಂಗಳೂರು ಕಡೆಯಿಂದ ಬರುವ ಸರಕು ಲಾರಿ ಸೇರಿದಂತೆ ದೊಡ್ಡ ವಾಹನಗಳು ಕುಂಬಳೆಗೆ ಬಂದು ಬದಿಯಡ್ಕ ಮಾರ್ಗವಾಗಿ ಚೆರ್ಕಳ ತಲುಪುತ್ತಿವೆ. ಇದರಿಂದ ಟ್ರಾಫಿಕ್ ಜಾಮ್ ಆಗುತ್ತಿದೆ. ಇಂದು ಬೆಳಗ್ಗೆ ಕುಂಬಳೆ ಕಡೆಯಿಂದ ಬರುತ್ತಿದ್ದ ಟ್ಯಾಂಕರ್ ಲಾರಿಯೊಂದು ಕನ್ಯಪ್ಪಾಡಿ ಬಳಿ ನಿಯಂತ್ರಣ ತಪ್ಪಿ ಚರಂಡಿಗೆ ಸಿಲುಕಿದೆ. ಕಿರಿದಾದ ರಸ್ತೆಯಿಂದಾಗಿ ಇತರೆ ವಾಹನಗಳು ಸಂಚರಿಸಲು ಸಾಧ್ಯವಾಗದೆ ಪರದಾಡಿದವು. ಟ್ಯಾಂಕರ್ ಲಾರಿಯನ್ನು ವಿಲೇವಾರಿಗೊಳಿಸಿದ ಬಳಿಕ ಸಂಚಾರ ಸುಗಮಗೊಂಡಿತು.