ಅಮರಾವತಿ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ಸತ್ಯವೇಡು ವಿಧಾನಸಭಾ ಕ್ಷೇತ್ರದ ತೆಲುಗು ದೇಶಂ ಪಕ್ಷದ (ಟಿಡಿಪಿ) ಶಾಸಕ ಕೋನೇಟಿ ಆದಿಮೂಲಂ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪಿ.
ಅಮರಾವತಿ: ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ಸತ್ಯವೇಡು ವಿಧಾನಸಭಾ ಕ್ಷೇತ್ರದ ತೆಲುಗು ದೇಶಂ ಪಕ್ಷದ (ಟಿಡಿಪಿ) ಶಾಸಕ ಕೋನೇಟಿ ಆದಿಮೂಲಂ ಅವರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಪಕ್ಷದ ರಾಜ್ಯಾಧ್ಯಕ್ಷ ಪಿ.
ಕೋನೇಟಿ ಆದಿಮೂಲಂ ಅವರು ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಆರೋಪವನ್ನು ಗಂಭೀರವಾಗಿ ಪರಿಗಣಿಸಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಪಕ್ಷದಿಂದ ಅಮಾನತುಗೊಳಿಸಲಾಗಿದೆ ಎಂದು ಟಿಡಿಪಿ ಪ್ರಕಟಣೆಯಲ್ಲಿ ತಿಳಿಸಿದೆ.
'ಶಾಸಕ ಆದಿಮೂಲಂ ನನಗೆ ನಿರಂತರವಾಗಿ ಲೈಂಗಿಕ ಕಿರುಕುಳ ನೀಡಿದ್ದಾರೆ' ಎಂದು ಆರೋಪಿಸಿರುವ ಮಹಿಳೆ, ಶಾಸಕನೊಂದಿಗೆ ತಾನು ಕಳೆದ ಖಾಸಗಿ ಕ್ಷಣಗಳನ್ನು ಪೆನ್ ಕ್ಯಾಮೆರಾ ಬಳಸಿ ಚಿತ್ರೀಕರಿಸಿದ್ದಾರೆ. ಈ ವಿಡಿಯೊ ಗುರುವಾರ ಬಹಿರಂಗಗೊಂಡಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹಂಚಿಕೆಯಾಗಿದೆ.
'ಶಾಸಕ ಕಳೆದ ಕೆಲ ತಿಂಗಳಿನಿಂದ ನನಗೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದ. ಕೊನೆಗೆ, ಆತನ ಲೈಂಗಿಕ ಆಸೆ ಪೂರೈಸಲು ಒಪ್ಪಿಕೊಳ್ಳಬೇಕಾಯಿತು. ಶಾಸಕನ ಕಿರುಕುಳ ಸಹಿಸಿಕೊಳ್ಳಲಾಗದೇ, ಆತನೊಂದಿಗಿನ ಖಾಸಗಿ ಕ್ಷಣಗಳನ್ನು ಚಿತ್ರೀಕರಿಸಿ, ಬಹಿರಂಗಗೊಳಿಸಿದೆ' ಎಂದು 36 ವರ್ಷದ ಮಹಿಳೆ ಆರೋಪಿಸಿದ್ದಾರೆ.
ಈ ವಿಡಿಯೊಗಳನ್ನು ಜುಲೈನಲ್ಲಿ ಚಿತ್ರೀಕರಿಸಿದ್ದು ಎನ್ನಲಾಗಿದೆ.
ಆದಿಮೂಲಂ 2019ರಲ್ಲಿ ಇದೇ ಕ್ಷೇತ್ರದಿಂದ ವೈಎಸ್‌ಆರ್ ಕಾಂಗ್ರೆಸ್‌ನಿಂದ ಗೆದ್ದಿದ್ದರು. ಪರಿಶಿಷ್ಟ ಜಾತಿಗೆ ಮೀಸಲಾದ ಸತ್ಯವೇಡು ಕ್ಷೇತ್ರದಿಂದ ಈ ಬಾರಿ ಸ್ಪರ್ಧಿಸಲು ಪಕ್ಷದ ಮುಖ್ಯಸ್ಥ ವೈ.ಎಸ್.ಜಗನ್‌ಮೋಹನ್ ರೆಡ್ಡಿ ಟಿಕೆಟ್ ನಿರಾಕರಿಸಿದ್ದರು. ಹೀಗಾಗಿ, ಟಿಡಿಪಿ ಸೇರಿದ್ದ ಆದಿಮೂಲಂ, ಸತ್ಯವೇಡು ಕ್ಷೇತ್ರದಿಂದ ಮತ್ತೆ ಗೆದ್ದು ಬಂದಿದ್ದರು.