ನವದೆಹಲಿ: ವೈವಾಹಿಕ ಸಂಬಂಧದಲ್ಲಿ ನಡೆಯುವ ಅತ್ಯಾಚಾರವನ್ನು ಕ್ರಿಮಿನಲ್ ಅಪರಾಧವನ್ನಾಗಿ ಪರಿಗಣಿಸಬೇಕು ಎಂಬ ಮನವಿ ಇರುವ ಅರ್ಜಿಯ ವಿಚಾರಣೆಯನ್ನು ಈ ವಾರ ವಿಚಾರಣೆಗೆ ಎತ್ತಿಕೊಳ್ಳಬಾರದು ಎಂದು ಕೇಂದ್ರ ಸರ್ಕಾರವು ಸುಪ್ರೀಂ ಕೋರ್ಟ್‌ಗೆ ಕೋರಿಕೆ ಸಲ್ಲಿಸಿದೆ.

ವೈವಾಹಿಕ ಸಂಬಂಧದಲ್ಲಿ ನಡೆಯುವ ಅತ್ಯಾಚಾರಕ್ಕೆ ಸಂಬಂಧಿಸಿದಂತೆ ತನ್ನ ಪ್ರತಿಕ್ರಿಯೆಯನ್ನು ಕೋರ್ಟ್‌ಗೆ ಇನ್ನಷ್ಟೇ ಸಲ್ಲಿಸಬೇಕಿದೆ ಎಂದು ಕೇಂದ್ರ ಹೇಳಿದೆ.
ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ, ಮನೋಜ್ ಮಿಶ್ರಾ ಅವರು ಇದ್ದ ತ್ರಿಸದಸ್ಯ ಪೀಠದ ಎದುರು ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕೇಂದ್ರವು ತನ್ನ ಪ್ರತಿಕ್ರಿಯೆಯನ್ನು ಇನ್ನಷ್ಟೇ ಸಲ್ಲಿಸಬೇಕಿರುವ ಕಾರಣಕ್ಕೆ ವಿಚಾರಣೆಯನ್ನು ಈ ವಾರ ಕೈಗೆತ್ತಿಕೊಳ್ಳುವುದು ಬೇಡ ಎಂದರು.
ವೈವಾಹಿಕ ಸಂಬಂಧದಲ್ಲಿ ಅತ್ಯಾಚಾರ ನಡೆದರೆ, ಪತಿಗೆ ಕ್ರಿಮಿನಲ್ ಕ್ರಮದಿಂದ ವಿನಾಯಿತಿ ನೀಡಿರುವುದನ್ನು ಕಾನೂನಿನ ತತ್ವಗಳ ಆಧಾರದಲ್ಲಿ ಪರಿಶೀಲಿಸಲಾಗುವುದು ಎಂದು ಪೀಠವು ಸೆಪ್ಟೆಂಬರ್ 18ರಂದು ಹೇಳಿತ್ತು.