HEALTH TIPS

ಆರ್‌ಜೆಡಿ ನಾಯಕ ಲಾಲು ಪ್ರಸಾದ್‌ಗೆ ಆಂಜಿಯೋಪ್ಲಾಸ್ಟಿ

 ಮುಂಬೈ: ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ಅವರು ಖಾಸಗಿ ಆಸ್ಪತ್ರೆಯಲ್ಲಿ ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದಾರೆ.

ಹೃದಯದ ರಕ್ತನಾಳದಲ್ಲಿ ತೊಂದರೆ ಕಾಣಿಸಿಕೊಂಡ ಪರಿಣಾಮ ಲಾಲು ಪ್ರಸಾದ್ ಅವರು ನಿನ್ನೆ(ಸೆಪ್ಟೆಂಬರ್ 10) ಇಲ್ಲಿನ ಏಷ್ಯನ್ ಆಸ್ಪತ್ರೆಗೆ ದಾಖಲಾಗಿದ್ದರು.

ಸದ್ಯ ಅವರು ಆಂಜಿಯೋಪ್ಲಾಸ್ಟಿ ಚಿಕಿತ್ಸೆಗೆ ಒಳಗಾಗಿದ್ದು ಒಂದೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ನಿರೀಕ್ಷೆಯಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

76 ವರ್ಷದ ಲಾಲು ಪ್ರಸಾದ್ ಅವರು ಹೃದಯಕ್ಕೆ ಸಂಬಂಧಿಸಿದಂತೆ 2014, 2018 ಮತ್ತು 2023ರಲ್ಲೂ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ದಾಖಲಾಗಿ ಗುಣಮುಖರಾಗಿದ್ದರು.

ಲಾಲು ಪ್ರಸಾದ್ ಅವರ ಅಭಿಮಾನಿಗಳು ಬೇಗ ಗುಣಮುಖರಾಗಲಿ ಎಂದು ಸಾಮಾಜಿಕ ಮಾಧ್ಯಮಗಳ ಮೂಲಕ ಹಾರೈಸುತ್ತಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries