ಇಂಫಾಲ್: ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟ ಪರಿಣಾಮ ಮುಚ್ಚಲ್ಪಟ್ಟಿದ್ದ ಶಾಲಾ ಕಾಲೇಜುಗಳು ಮಂಗಳವಾರ ಮತ್ತೆ ಪುನರಾರಂಭವಾಗಿವೆ ಎಂದು ಸರ್ಕಾರ ಹೇಳಿದೆ.
ಇಂಫಾಲ್: ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟ ಪರಿಣಾಮ ಮುಚ್ಚಲ್ಪಟ್ಟಿದ್ದ ಶಾಲಾ ಕಾಲೇಜುಗಳು ಮಂಗಳವಾರ ಮತ್ತೆ ಪುನರಾರಂಭವಾಗಿವೆ ಎಂದು ಸರ್ಕಾರ ಹೇಳಿದೆ.
ಸೆಪ್ಟೆಂಬರ್ 7ರಿಂದ ಶಾಲಾ ಕಾಲೇಜುಗಳನ್ನು ಮುಚ್ಚಲಾಗಿತ್ತು.
ಜನಾಂಗೀಯ ಕಲಹದಿಂದಾಗಿ ಕಳದೊಂದು ವಾರದಿಂದ ಮಣಿಪುರದಲ್ಲಿ ಪರಿಸ್ಥಿತಿ ಬಿಗಡಾಯಿಸಿತ್ತು.
ಇದೀಗ ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದಿದ್ದು ಶಾಲೆಗಳನ್ನು ಆರಂಭಿಸಲಾಗಿದೆ ಎಂದು ಸರ್ಕಾರ ಅಧಿಕಾರಿಗಳು ಹೇಳಿದ್ದಾರೆ.
ಕಳೆದ ವರ್ಷ ಮೇ ತಿಂಗಳಿನಿಂದ ಇಂಫಾಲದಲ್ಲಿ ಜನಾಂಗೀಯ ಕಲಹದಲ್ಲಿ 200ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.